ನಾನು ಸಿಎಂ ಹುದ್ದೆ ಆಕಾಂಕ್ಷಿಯಲ್ಲ: ಶೆಟ್ಟರ್
ಬೆಳಗಾವಿ,
ನ.9: 'ತಾವು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ. ಅಂತಹ ಯಾವುದೇ ಬೆಳವಣಿಗೆಗಳು ಬಿಜೆಪಿಯಲ್ಲಿ ನಡೆಯುತ್ತಿಲ್ಲ' ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಜಗದೀಶ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಹಾಗೂ ಸೀರೆ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 'ಅನರ್ಹ ಶಾಸಕರು ಹೇಳಿರುವಂತೆ ತಾವು ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿಲ್ಲ. ಪಕ್ಷದ ಹಿರಿಯರ ಅಣತಿಯಂತೆ ನಡೆದುಕೊಳ್ಳುತ್ತೇನೆ 'ಎಂದು ಅವರು ಪುನರುಚ್ಚರಿಸಿದರು. id="toptextpromo">ಬಂಡಾಯವೆದ್ದು
ಅನರ್ಹಗೊಂಡಿರುವ ಭಿನ್ನರ ನೇತೃತ್ವ ವಹಿಸಿಕೊಂಡಿರುವ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ, ತಾವು ಸುಪ್ರೀಂ ಕೋರ್ಟ್‌ನಲ್ಲಿ ಗೆದ್ದರೇ, ಶೆಟ್ಟರ್ ಸಿಎಂ ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಶೆಟ್ಟರ್ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಅನರ್ಹ ಶಾಸಕರನ್ನು ನಾನು ಸಂಪರ್ಕಿಸಿಲ್ಲ. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ನಮಗೆ ವಿಶ್ವಾಸವಿದೆ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು. id='are-slot-1' class='oiad oi-axt oiadv'> id='top-searched-articles'>ಸಂಪುಟ
ವಿಸ್ತರಣೆ ಹಾಗೂ ಸಚಿವ ಸ್ಥಾನಕ್ಕೆ ನಡೆದಿರುವ ಲಾಬಿಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಶೆಟ್ಟರ್, ಈ ಬಗ್ಗೆ ಯಡಿಯೂರಪ್ಪ ಹಾಗೂ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಸಮರ್ಥರಿಗೆ ಸಂಪುಟದಲ್ಲಿ ಸ್ಥಾನ ಸಿಕ್ಕೇ ಸಿಗುತ್ತದೆ. ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಗಾಗಿ ಸಿಎಂ ಮೇಲೆ ಒತ್ತಡ ಹೇರಿಲ್ಲ ಎಂದರು.











Click it and Unblock the Notifications