ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪೃಥ್ವಿರಾಜ್ ಚೌಹಾಣ್

By Mrutyunjaya Kalmat
|
Google Oneindia Kannada News

Prithviraj Chavan
ನವದೆಹಲಿ, ನ. 10 : ನಿರೀಕ್ಷೆಯಂತೆ ಕೇಂದ್ರ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಪೃಥ್ವಿರಾಜ್ ಚೌಹಾಣ್ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಅಶೋಕ್ ಚವಾಣ್ ಪದಚ್ಯುತಿ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ನಾಲ್ಕೈದು ನಾಯಕರು ಹೆಸರು ಕೇಳಿಬಂದರೂ ಕೊನೆಯದಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪೃಥ್ವಿರಾಜ್ ಚೌಹಾಣ್ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ನಿರ್ಧರಿಸಿದ್ದಾರೆ.

ಆದರ್ಶ್ ಹೌಸಿಂಗ್ ಸೊಸೈಟಿ ಫ್ಲ್ಯಾಟ್ ಹಗರಣದಲ್ಲಿ ಸಿಲುಕಿದ್ದ ಅಶೋಕ್ ಚವಾಣ್ ಅವರು ಸಿಎಂ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದರು. ತಮ್ಮ ಅತ್ತೆ ಹಾಗೂ ಇಬ್ಬರು ಸಂಬಂಧಿಕರಿಗೆ ಆದರ್ಶ ಸೊಸೈಟಿ ಫ್ಲ್ಯಾಟ್ ಗಳನ್ನು ಕೊಡಿಸಿರುವ ಹಗರಣ ಬೆಳಕಿಗೆ ಬಂದ ನಂತರ, ಮಹಾ ಸಿಎಂ ತಲೆದಂಡಕ್ಕೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿತ್ತು. ಆದರೆ, ಒಬಾಮಾ ಅವರ ಭಾರತ ಪ್ರವಾಸದ ಹಿನ್ನೆಲೆಯಲ್ಲಿ ಅಶೋಕ್ ಚವಾಣ್ ಅವರ ರಾಜೀನಾಮೆ ಅಂಗೀಕಾರ ಪ್ರಕ್ರಿಯೆ ತಡವಾಗಿತ್ತು.

ದಕ್ಷಿಣ ಮುಂಬೈನ ಕೊಲಾಬಾ ಪ್ರದೇಶದಲ್ಲಿರುವ 31 ಮಹಡಿಯ ಆದರ್ಶ್ ಸೊಸೈಟಿ ಫ್ಲ್ಯಾಟ್ ಗಳನ್ನು ಕಾರ್ಗಿಲ್ ಸಮರದ ಹೀರೋಗಳು ಹಾಗೂ ಮೃತ ಯೋಧರ ಪತ್ನಿಯರಿಗೆ ನೀಡುವ ಸಲುವಾಗಿ ನಿರ್ಮಿಸಲಾಗಿತ್ತು, ಆದರೆ, ಇದನ್ನು ರಾಜಕಾರಣಿಗಳು ಹಾಗೂ ಅವರ ಸಂಬಂಧಿಗಳು, ನಿವೃತ್ತ ಸೇನಾಧಿಕಾರಿಗಳು ಬಳಸುತ್ತಿದ್ದರು. ಇದರಿಂದ ವಿವಾದ ಹುಟ್ಟಿಕೊಂಡಿತ್ತು.

ಸೇನೆಯ ಹಿರಿಯ ಅಧಿಕಾರಿಗಳಾದ ಎನ್ ಸಿ ವಿಜ್, ದೀಪಕ್ ಕಪೂರ್, ಮಾಧವೇಂದ್ರ ಸಿಂಗ್, ರಾಜಕಾರಣಿ ಶರದ್ ಪವಾರ್ ಸೇರಿದಂತೆ ಸುಮಾರು 103ಕ್ಕೂ ಅಧಿಕ ಗಣ್ಯರ ಹೆಸರು ಈ ಹಗರಣದಲ್ಲಿ ಸಿಲುಕಿಕೊಂಡಿದೆ. ಇಲ್ಲಿ ಫ್ಲ್ಯಾಟ್ ಹೊಂದಿದ್ದ ಸೇನೆಯ ನಿವೃತ್ತ ಅಧಿಕಾರಿಗಳು, ಕಾರ್ಗಿಲ್ ಹುತಾತ್ಮರ ಕುಟುಂಬಗಳಿಗೆ ಮರಳಿಸಿದ್ದಾರೆ. ಈ ನಡುವೆ ಫ್ಲ್ಯಾಟ್ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿದೆ.

English summary
Congress President Sonia Gandhi has chosen Prithviraj Chavan to be the Chief Minister of Maharashtra, Finance Minister Pranab Mukherjee told reporters, adding that Maharashtra Congress Legislative Party (CLP) completely backed the decision.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X