ಬೆಂಗಳೂರು ವಿವಿ ಒಡೆದು ಮೂರು ಪ್ರತ್ಯೇಕ ವಿವಿ

Bangalore universtiy likely to be get splitted soon
ಬೆಂಗಳೂರು, ನ.11: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಒಳಪಡುವ ಕಾಲೇಜುಗಳ ಹಾಗೂ ವಿದ್ಯಾರ್ಥಿಗಳ ಸಂಖ್ಯೆ ಅತಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯವನ್ನು ಮೂರು ವಿ.ವಿ.ಗಳನ್ನಾಗಿ ವಿಭಜನೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್. ಆಚಾರ್ಯ ತಿಳಿಸಿದ್ದಾರೆ. ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಕಾಲದಲ್ಲಿ ಎನ್ ರುದ್ರಯ್ಯ ಸಮಿತಿ ಮಾಡಿದ್ದ ಶಿಫಾರಸ್ಸಿನ ಅನ್ವಯ ಈ ವಿಭಜನೆ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ ಎಂದು ಆಚಾರ್ಯ ಹೇಳಿದರು.

ಸದ್ಯ ವಿ.ವಿ. ವ್ಯಾಪ್ತಿಗೆ ಸುಮಾರು 760ಕ್ಕೂ ಹೆಚ್ಚು ಕಾಲೇಜುಗಳು ಒಳಪಡುತ್ತವೆ. ವಿದ್ಯಾರ್ಥಿಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಇದರಿಂದ ಶಿಕ್ಷಣ ಗುಣಮಟ್ಟ ಕಾಪಾಡಿಕೊಳ್ಳಲು ಕಷ್ಟವಾಗುತ್ತಿದೆ. ಕೊಲಾರ ಮತ್ತು ಚಿಕ್ಕಬಳ್ಳಾಪುರ ವ್ಯಾಪ್ತಿಗೆ ಒಂದು ವಿಶ್ವ ವಿದ್ಯಾಲಯ, ಬಿಬಿಎಂಪಿ ವ್ಯಾಪ್ತಿಗೆ ಮತ್ತೊಂದು ಹಾಗೂ ಪ್ರಸ್ತುತವಿರುವ ವಿಶ್ವವಿದ್ಯಾಲಯವನ್ನು ಹಾಗೆಯೇ ಉಳಿಸಿಕೊಳ್ಳಲಾಗುವುದು. 250 ಕಾಲೇಜುಗಳಿಗೆ ಒಂದು ವಿ.ವಿಯನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದರು ಎಂದು ಆಚಾರ್ಯ ವಿವರಿಸಿದರು.

ಈ ಬಗ್ಗೆ ಕುಲಪತಿ ಹಾಗೂ ಸಂಬಂಧಪಟ್ಟವರೊಂದಿಗೆ ಶೀಘ್ರದಲ್ಲಿಯೇ ಸಭೆ ನಡೆಸಲಾಗುವುದು. ನಂತರ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಅಂತಿಮ ಕ್ರಮ ಕೈಗೊಳ್ಳಲಾಗುವುದು. ಕಳೆದ ಶೈಕ್ಷಣಿಕ ಸಾಲಿನಲ್ಲಿಯೇ ಈ ಬಗ್ಗೆ ಚರ್ಚೆ ನಡೆದಿತ್ತು. ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ. ಈ ಭಾರಿ ವಿಳಂಬ ಮಾಡದೇ ಈ ಕಾರ್ಯವನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು ಎಂದರು.

ಈ ರೀತಿ ಬೆಂ.ವಿ.ವಿಯನ್ನು ಮೂರು ಭಾಗಗಳನ್ನಾಗಿ ಮಾಡುವುದರಿಂದ ಪರೀಕ್ಷಾ ಫಲಿತಾಂಶಗಳು ಶೀಘ್ರವಾಗಿ ವಿದ್ಯಾರ್ಥಿಗಳಿಗೆ ಲಭ್ಯವಾಗುತ್ತವೆ. ಅಲ್ಲದೆ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಂತಹ ದೂರದ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಂಗಳೂರಿಗೆ ಬಂದು ಹೋಗುವುದು ತಪ್ಪುತ್ತದೆ. ಈ ಕಾರ್ಯ ಶೀಘ್ರ ಆಗಲಿದೆ ಎಂದು ಭರವಸೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+