ಕಾರು ಹಾಯ್ದು ಬೆಳಗಾವಿ ಬಳಿ ಇಬ್ಬರು ಬಲಿ

ಮಡಿದವರನ್ನು ಕರಿಬಸಪ್ಪ ಮತ್ತು ಬಸವ್ವ ಎಂದು ಗುರುತಿಸಲಾಗಿದೆ. ಮೃತರು ಮತ್ತು ಗಾಯಗೊಂಡವರು ಬಸ್ಸಿಗಾಗಿ ರಸ್ತೆಬದಿಯಲ್ಲಿ ಕಾಯುತ್ತಿದ್ದರು. ಅಡ್ಡಾದಿಡ್ಡಿ ಕಾರು ಓಡಿಸಿ ಅಪಘಾತಕ್ಕೆ ಕಾರಣನಾದ ಕಾರು ಚಾಲಕನನ್ನು ಬಂಧಿಸಲಾಗಿದೆ. ಗಾಯಗೊಂಡವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಇದರಿಂದಾಗಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸರು ಕೂಡಲೆ ಸ್ಥಳಕ್ಕೆ ಧಾವಿಸಿ ಗ್ರಾಮಸ್ಥರನ್ನು ಶಾಂತಗೊಳಿಸಿದರು.
ಉಚಿತ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7












Click it and Unblock the Notifications