ಆರೆಸ್ಸೆಸ್ ಪ್ರತಿಭಟನೆ ವೇಳೆ ಕಲ್ಲು ತೂರಾಟ

ನಗರದ ಕ್ಲಬ್ ರಸ್ತೆಯಲ್ಲಿನ ಶಿಕ್ಷಣ ಸಂಸ್ಥೆ, ಪ್ರಾರ್ಥನಾ ಮಂದಿರ ಹಾಗೂ ಎಟಿಎಂ ಕೇಂದ್ರದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಕಿಟಕಿಯ ಗಾಜು ಪುಡಿ ಮಾಡಿದ್ದಾರೆ. ಅಲ್ಲದೆ, ಸಂಸ್ಥೆಯ ಆರೇಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ಪ್ರಸಂಗವು ನಡೆದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಘಟನಾ ಸ್ಥಳಕ್ಕೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಿಗಿ ಬಂದೋ ಬಸ್ತ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ 60 ಮಂದಿಯ ವಿರುದ್ಧ ದೂರು ದಾಖಲಾಗಿದೆ.
ಮೈಸೂರು, ಬೆಂಗಳೂರು, ಚಿಕ್ಕಮಗಳೂರು, ಹುಬ್ಬಳ್ಳಿ, ಬೆಳಗಾವಿ, ಗದಗ, ಬಿಜಾಪುರ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ ಆರೆಸ್ಸೆಸ್ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.












Click it and Unblock the Notifications