ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರೆಸ್ಸೆಸ್ ಪ್ರತಿಭಟನೆ ವೇಳೆ ಕಲ್ಲು ತೂರಾಟ

By Mrutyunjaya Kalmat
|
Google Oneindia Kannada News

Belgaum map
ಬೆಳಗಾವಿ, ನ. 11 : ಕೇಂದ್ರದ ಹಿಂದೂ ವಿರೋಧಿ ನೀತಿ ಹಾಗೂ ಅಜ್ಮೀರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಆರೆಸ್ಸೆಸ್ ಮುಖಂಡ ಇಂದ್ರೇಶ್ ಕುಮಾರ್ ವಿರುದ್ಧ ಸುಳ್ಳು ಆರೋಪದಿಂದ ಆರೆಸ್ಸೆಸ್ ಕಾರ್ಯಕರ್ತರು ಪ್ರತಿಭಟನೆ ವೇಳೆ ಕಿಡಿಗೇಡಿಗಳು ಶಾಲೆ ಹಾಗೂ ಎಟಿಎಂಗಳ ಕಲ್ಲು ತೂರಾಟ ನಡೆದಿದ್ದರಿಂದ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ನಗರದ ಕ್ಲಬ್ ರಸ್ತೆಯಲ್ಲಿನ ಶಿಕ್ಷಣ ಸಂಸ್ಥೆ, ಪ್ರಾರ್ಥನಾ ಮಂದಿರ ಹಾಗೂ ಎಟಿಎಂ ಕೇಂದ್ರದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಕಿಟಕಿಯ ಗಾಜು ಪುಡಿ ಮಾಡಿದ್ದಾರೆ. ಅಲ್ಲದೆ, ಸಂಸ್ಥೆಯ ಆರೇಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ಪ್ರಸಂಗವು ನಡೆದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಘಟನಾ ಸ್ಥಳಕ್ಕೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಿಗಿ ಬಂದೋ ಬಸ್ತ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ 60 ಮಂದಿಯ ವಿರುದ್ಧ ದೂರು ದಾಖಲಾಗಿದೆ.

ಮೈಸೂರು, ಬೆಂಗಳೂರು, ಚಿಕ್ಕಮಗಳೂರು, ಹುಬ್ಬಳ್ಳಿ, ಬೆಳಗಾವಿ, ಗದಗ, ಬಿಜಾಪುರ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ ಆರೆಸ್ಸೆಸ್ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X