ರಾಜ್ಯದಲ್ಲಿ ಅವನತಿಯತ್ತ ಉರ್ದು ಭಾಷೆ

Urdu Academy president sacked
ಬೆಂಗಳೂರು, ನ. 11: ರಾಜ್ಯದಲ್ಲಿ ಅವನತಿಯತ್ತ ಸಾಗುತ್ತಿರುವ ಉರ್ದು ಭಾಷೆಯ ಉಳಿವಿಗಾಗಿ ಒಂದೆಡೆ ವಕ್ಫ್ ಸಚಿವ ಮಮ್ತಾಜ್ ಅಲಿ ಖಾನ್ ಹೋರಾಟ ನಡೆಸಿದ್ದಾರೆ. ಇನ್ನೊಂದೆಡೆ, ಸರ್ಕಾರದೊಡನೆ ಉರ್ದು ಅಕಾಡೆಮಿ ಅಧ್ಯಕ್ಷ ಖಲೀಲ್ ಮಮೂಲ್ ಜಟಾಪಟಿ ತಾರಕಕ್ಕೇರಿದೆ. ಇದರ ಪರಿಣಾಮ ಉರ್ದು ಅಕಾಡೆಮಿ ಅಧ್ಯಕ್ಷರ ವಜಾಕ್ಕೆ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ವಿರುದ್ಧವೇ ದನಿ ಎತ್ತಿದ್ದ ನಿವೃತ್ತ ಪೊಲೀಸ್ ಅಧಿಕಾರಿ, ಉರ್ದು ಅಕಾಡೆಮಿ ಅಧ್ಯಕ್ಷ ಖಲೀಲ್ ಮಮೂಲ್ ಅವರು ಸರ್ಕಾರದಿಂದ 40 ಲಕ್ಷ ಅನುದಾನ ಪಡೆದರೂ, ಸಮರ್ಪಕವಾಗಿ ಅನುದಾನ ಸಿಕ್ಕಿಲ್ಲ ಎಂದು ಬಹಿರಂಗವಾಗಿ ಸರ್ಕಾರವನ್ನು ದೂರಿದ್ದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೋಡಿಕೊಳ್ಳುತ್ತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಬರುವ ಉರ್ದು ಅಕಾಡೆಮಿ ಬರುತ್ತದೆ. ಆದರೆ, ಕಳೆದ ಎರಡೂವರೆ ವರ್ಷಗಳಲ್ಲಿ ಅಕಾಡೆಮಿ ಕಾರ್ಯಕ್ರಮಗಳ ಬಗ್ಗೆ ಸಿಎಂಗೆ ಅಧ್ಯಕ್ಷ ಖಲೀಲ್ ವರದಿ ಮಾಡಿಲ್ಲ. ಸಿಎಂ ಜತೆ ಚರ್ಚಿಸದೆ ಶಿಷ್ಟಾಚಾರ ಉಲ್ಲಂಘಿಸಿ, ಸ್ವಯಂ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿಗಳ ಅನುಮತಿ ಪಡೆಯದೇ ಡಿಸೆಂಬರ್ 27 ರಿಂದ 30ರವರೆಗೆ ಬೆಂಗಳೂರಿನಲ್ಲಿ ವಿಶ್ವ ಉರ್ದು ಸಮ್ಮೇಳನ ಆಯೋಜಿಸಿ, ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಆಹ್ವಾನಿಸಲು ಸಿದ್ಧತೆ ನಡೆಸಲಾಗಿತ್ತು. ಉರ್ದು ಅಕಾಡೆಮಿ ಕೆಲ ಮಹಿಳಾ ಸಿಬ್ಬಂದಿಗಳು ಸೇರಿದಂತೆ ಹಲವು ಸಿಬ್ಬಂದಿಗಳು ಅಧ್ಯಕ್ಷ ಖಲೀಲ್ ಮೇಲೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ದೂರಿತ್ತಿದ್ದರು. ಈ ಎಲ್ಲಾ ಕಾರಣಗಳಿಂದ ಖಲೀಲ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಶಾಲೆಗಳಲ್ಲಿ ಉರ್ದು ಉದ್ಧಾರ: ಎಲ್ಲ ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಉರ್ದುವನ್ನು ಕಡ್ಡಾಯವಾಗಿ ಒಂದು ಭಾಷೆಯನ್ನಾಗಿ ಕಲಿಸಬೇಕಾಗಿದೆ. ರಾಜ್ಯದಲ್ಲಿನ ಉರ್ದು ಶಾಲೆಗಳ ಪರಿಸ್ಥಿತಿ ಅತ್ಯಂತ ಶೋಚನಿಯವಾಗಿದೆ. ಹಲವೆಡೆ ಶಾಲೆಗಳಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳು ಇಲ್ಲ ಎಂದು ಹಜ್, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಡಾ. ಮುಮ್ತಾಜ್ ಅಲಿ ಖಾನ್ ಅಭಿಪ್ರಾಯಪಟ್ಟಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ 6ರಿಂದ 10ನೆ ತರಗತಿಗೆ ಉರ್ದು ಅಧ್ಯಾಪಕರಿಲ್ಲದಿರುವುದು ಸರಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಂಗೀತ ಶಿಕ್ಷಕರನ್ನು ಕೈ ಬಿಟ್ಟು ಆ ಸ್ಥಾನಕ್ಕೆ ಉರ್ದು ಅಧ್ಯಾಪಕ ರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+