ದೇವಾಲಯ ತೆರವು ವಿರೋಧಿಸಿ ಭಜರಂಗದಳ ಪ್ರತಿಭಟನೆ
ಮಂಡ್ಯ,
ನ. 12 : ಸುಪ್ರೀಂಕೋರ್ಟ್ ಆದೇಶದ ಅನ್ವಯ ಜಿಲ್ಲಾಡಳಿತ ಅಕ್ರಮ ದೇವಸ್ಥಾನಗಳನ್ನು ತೆರವುಗೊಳಿಸಲು ಮುಂದಾಗಿರುವುದನ್ನು ಭಜರಂಗದಳ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ನ. 17ರಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. id="toptextpromo">ಮಾಧ್ಯಮ
ಪ್ರತಿನಿಧಿಗಳೊಂದಿಗೆ ಮಾತನಾಡಿದ ಭಜರಂಗದಳದ ರಾಜ್ಯ ಸಹ ಸಂಚಾಲಕ ಮಂಜುನಾಥ, ಇತರ ಜಿಲ್ಲೆಗಳಲ್ಲಿ ದೇವಾಲಯಗಳ ತೆರವುಗೊಳಿಸುವುದನ್ನು ನಿಲ್ಲಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಅಲ್ಲಿನ ಜಿಲ್ಲಾಡಳಿತ ತೀರ್ಮಾನಿಸಿದೆ. ಆದರೆ, ಮಂಡ್ಯ ಜಿಲ್ಲಾಧಿಕಾರಿಗಳು ನ್ಯಾಯಾಲಯದ ಆದೇಶದಂತೆ ದೇವಾಲಯಗಳನ್ನು ತೆರವುಗೊಳಿಸಲು ಮುಂದಾಗಿದ್ದು, ಕೂಡಲೇ ತಮ್ಮ ನಿರ್ಧಾರವನ್ನು ಬದಲಾಯಿಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಅಕ್ರಮ
ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಿ ಅಥವಾ ಸ್ಥಳಾಂತರಿಸಿ ಎಂದು ನ್ಯಾಯಾಲಯ ಹೇಳಿರುವುದನ್ನು ಜಿಲ್ಲಾಧಿಕಾರಿಗಳು ಸರಿಯಾಗಿ ಅರ್ಥೈಸಿಕೊಳ್ಳದೆ ದೇವಾಲಯಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ ಎಂದು ಅವರು ದೂರಿದರು. ನೂರಾರು ವರ್ಷಗಳ ಇತಿಹಾಸವಿರುವ ದೇವಾಲಯಗಳಿವೆ. ಅಂತಹ ದೇವಾಲಯಗಳನ್ನು ಏಕಾಏಕಿ ತೆರವುಗೊಳಿಸಿದರೆ ಭಕ್ತರ ಭಾವನೆಗಳಿಗೆ ನೋವು ಉಂಟಾಗುತ್ತದೆ. ಆದ್ದರಿಂದ ತೆರವು ಕಾರ್ಯ ಸ್ಥಗಿತಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.











Click it and Unblock the Notifications