ಸುದರ್ಶನ್ ಹೇಳಿಕೆ ಬಹುದೊಡ್ಡ ತಪ್ಪು : ಜೋಶಿ
ಭೋಪಾಲ್,
ನ.15 : ಆರೆಸ್ಸೆಸ್‌ನ ಮಾಜಿ ಮುಖ್ಯಸ್ಥ ಕೆಎಸ್ ಸುದರ್ಶನ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಬಹು ದೊಡ್ಡ ತಪ್ಪು ಮಾಡಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕೈಲಾಸ್ ಜೋಷಿ ಅಭಿಪ್ರಾಯಪಟ್ಟಿದ್ದಾರೆ. id="toptextpromo">ಸಾರ್ವಜನಿಕ
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೋನಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ತಪ್ಪು. ಇದರ ಹಿಂದೆ ಸಂಘ ಪರಿವಾರವಾಗಲಿ ಮತ್ತು ಬಿಜೆಪಿಯ ಪಾತ್ರವಾಗಲಿ ಇಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆಯನ್ನು ನಿಲ್ಲಿಸಿ ಸುದರ್ಶನ್ ಹೇಳಿಕೆಯನ್ನು ಕ್ಷಮಿಸಬೇಕು. ದೇಶದ ಹಿತಾಸಕ್ತಿಗೆ ಪ್ರತಿಭಟನೆ ಒಳ್ಳೆಯದಲ್ಲ ಎಂದು ಅವರು ಹೇಳಿದರು. id='are-slot-1' class='oiad oi-axt oiadv'> id='top-searched-articles'>ಕಾರ್ಯಕ್ರಮವೊಂದರಲ್ಲಿ
ಪಾಲ್ಗೊಂಡಿದ್ದ ಸುದರ್ಶನ್, ಸೋನಿಯಾ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಸೋನಿಯಾ ಗಾಂಧಿ ಅವರು ಅಮೆರಿಕದ ಸಿಐಎ ಏಜೆಂಟ್ ಆಗಿದ್ದು, ಮಾಜಿ ಪ್ರಧಾನಮಂತ್ರಿ ರಾಜೀವ ಗಾಂಧಿ, ಇಂದಿರಾ ಗಾಂಧಿ ಅವರ ಕೊಲೆಗೆ ಸಂಚು ರೂಪಿಸಿದ್ದರು ಎಂದು ಹೇಳಿಕೆ ನೀಡಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರು ದೇಶಾದ್ಯಂತ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿತ್ತು.











Click it and Unblock the Notifications