ನಾವು ನಿಮ್ಮಿಂದ ಪಾಠ ಕಲಿಯಬೇಕಿಲ್ಲ : ರೇಣುಕ

MP Renukacharya
ಬೆಂಗಳೂರು, ನ. 17 : ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಎಂಬಂತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಂದ ನಾವು ನೀತಿ ಪಾಠ ಕಲಿಯಬೇಕಿಲ್ಲ ಎಂದು ಅಬಕಾರಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ.

ನಮಗೆ ಪ್ರತಿಪಕ್ಷ ಸ್ಥಾನ ಕಾಯಂ ಎಂಬ ಆತಂಕದಲ್ಲಿರುವ ಪ್ರತಿಪಕ್ಷ ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸರಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಸರಕಾರ ಅಸ್ತಿರಗೊಳಿಸುವ ಅವರ ಯಾವುದೇ ಕುತಂತ್ರ ಫಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಕ್ಕೆ ಬಂದ ನಂತರ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಅದಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದನ್ನು ಸಹಿಸದ ಪ್ರತಿಪಕ್ಷ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಕೊಡಲಿ ಎಂದು ಆಗ್ರಹಿಸುವುದನ್ನೇ ಕಾಯಕವಾಗಿಸಿಕೊಂಡಿದ್ದಾರೆ ಎಂದರು.

ಸದ್ಯ ರಾಜ್ಯದ ಮುಂದೆ ಅನೇಕ ಸವಾಲುಗಳಿವೆ. ಅವುಗಳನ್ನು ಸಮರ್ಥವಾಗಿ ಎದುರಿಸಿ ಸಮಗ್ರ ಅಭಿವೃದ್ಧಿಗೆ ಕ್ರಮ ಜರುಗಿಸಬೇಕಿದೆ. ಅದಕ್ಕಾಗಿ ಪ್ರತಿಪಕ್ಷಗಳ ಸಹಕಾರ ಬೇಕು. ಆದರೆ, ರಚನಾತ್ಮಕ ಪ್ರತಿಪಕ್ಷವಾಗಿ ಕಾರ್ಯ ನಿರ್ವಹಿಸುವ ಬದಲು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಸರಕಾರ ಉರುಳಿಸಲು ಕುತಂತ್ರ ನಡೆಸಿದ್ದಾರೆ. ಒಂದರ ಮೇಲೊಂದರಂತೆ ಸರಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+