ಚಾಮರಾಜನಗರದಲ್ಲಿ ಪ್ಲಾಸ್ಟಿಕ್ ಬಳಸಿದರೆ ಶಿಕ್ಷೆ

ಈ ಬಗ್ಗೆ ನಗರಸಭೆ ಅಧಿಕಾರಿಗಳು ಅಗಿಂದಾಗ್ಗೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ 20 ಮೈಕ್ರಾನ್‌ಗಿಂತ ತೆಳುವಾದ ಪ್ಲಾಸ್ಟಿಕ್ ಕೈ ಚೀಲ ಹಾಗೂ ಕಪ್ಪು ಬಣ್ಣದ ಪ್ಲಾಸ್ಟಿಕ್ ಚೀಲಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹ ಕೈ ಚೀಲಗಳನ್ನು ನಗರಸಭೆ ವಶಕ್ಕೆ ತೆಗೆದುಕೊಂಡು ಅಂಗಡಿ ಮಾಲಕರ ವಿರುದ್ಧ ಕಾನೂನು ಕ್ರಮ ಜರಗಿಸಲಿದ್ದಾರೆ. ಇದರಿಂದ ಉಂಟಾಗುವ ನಷ್ಟಗಳಿಗೆ ನಗರಸಭೆ ಜವಾಬ್ದಾರಿಯಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ಲಾಸ್ಟಿಕ್ ಚೀಲಗಳ ಬಳಕೆ ಪ್ರಮಾಣ ಅಧಿಕವಾಗಿದ್ದು, ದೈನಂದಿನ ತ್ಯಾಜ್ಯ ವಸ್ತು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಕಷ್ಟವಾಗಿದೆ. ಸಾರ್ವಜನಿಕರು ತಿಂಡಿ, ತಿನಿಸುಗಳನ್ನು ಪ್ಲಾಸ್ಟಿಕ್ ಚೀಲಗಳಿಗೆ ಸುತ್ತಿ ಬಿಸಾಡುತ್ತಿರುವುದರಿಂದ ಇದನ್ನು ತಿನ್ನುವ ಜಾನುವಾರುಗಳ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಅಂಗಡಿ ಮಾಲಕರು ಪ್ಲಾಸ್ಟಿಕ್ ಚೀಲಗಳ ಬಳಕೆ ಮಾಡದಿರುವಂತೆ ನಗರ ಸಭೆ ಆಯುಕ್ತರು ಸೂಚಿಸಿದ್ದಾರೆ.
ಪರಿಸರ ತಜ್ಞರ ಪ್ರಕಾರ, ಇಡೀ ಪ್ರಪಂಚದಲ್ಲಿ ವರ್ಷವೊಂದಕ್ಕೆ 100 ದಶಲಕ್ಷ ಟನ್ ಮತ್ತು ಭಾರತದಲ್ಲಿ 2 ದಶಲಕ್ಷ ಟನ್ ಪ್ಲಾಸ್ಟಿಕ್ ಉತ್ಪಾದನೆಯಾಗುತ್ತಿದೆ. ಅಂದರೆ ಒಬ್ಬ ಮನುಷ್ಯ ಸರಾಸರಿ 3ರಿಂದ 4 ಕೆ.ಜಿ.ಯಷ್ಟು ಪ್ಲಾಸ್ಟಿಕ್ ಬಳಸುತ್ತಿದ್ದಾನೆ. 'ಬೇರೆ ದೇಶಗಳಲ್ಲಿ ಒಬ್ಬ ವ್ಯಕ್ತಿ ಸರಾಸರಿ 60ರಿಂದ 80 ಕೆ.ಜಿ. ಪ್ಲಾಸ್ಟಿಕ್ ಬಳಕೆ ಮಾಡಿದರೂ ಅದನ್ನು ಸಮರ್ಪಕವಾಗಿ ನಾಶಪಡಿಸುತ್ತಾರೆ. ಇಲ್ಲಿ ತ್ಯಾಜ್ಯ ನಿರ್ವಹಣೆ ಕೂಡಾ ಬಗೆಹರಿಯದ ಸಮಸ್ಯೆಯಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications