ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಾಮರಾಜನಗರದಲ್ಲಿ ಪ್ಲಾಸ್ಟಿಕ್ ಬಳಸಿದರೆ ಶಿಕ್ಷೆ

By Mahesh
|
Google Oneindia Kannada News

Plastic ban in Chamarajanagar
ಚಾಮರಾಜನಗರ, ನ. 19: ಪರಿಸರದ ಸಂರಕ್ಷಣೆಯ ಹಿತದೃಷ್ಟಿಯಿಂದಾಗಿ ಪರಿಸರ ಹಾಗೂ ಅರಣ್ಯ ಸಚಿವಾಲಯದ ಕಾಯ್ದೆ ಅನ್ವಯ ನಗರಸಭೆ ವ್ಯಾಪ್ತಿಯಲ್ಲಿ 20 ಮೈಕ್ರಾನ್‌ಗಿಂತ ತೆಳುವಾದ ಪ್ಲಾಸ್ಟಿಕ್ ಕೈ ಚೀಲಗಳ ಬಳಕೆಯನ್ನು ನಗರಸಭೆ ನಿಷೇಧಿಸಿದೆ.

ಈ ಬಗ್ಗೆ ನಗರಸಭೆ ಅಧಿಕಾರಿಗಳು ಅಗಿಂದಾಗ್ಗೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ 20 ಮೈಕ್ರಾನ್‌ಗಿಂತ ತೆಳುವಾದ ಪ್ಲಾಸ್ಟಿಕ್ ಕೈ ಚೀಲ ಹಾಗೂ ಕಪ್ಪು ಬಣ್ಣದ ಪ್ಲಾಸ್ಟಿಕ್ ಚೀಲಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹ ಕೈ ಚೀಲಗಳನ್ನು ನಗರಸಭೆ ವಶಕ್ಕೆ ತೆಗೆದುಕೊಂಡು ಅಂಗಡಿ ಮಾಲಕರ ವಿರುದ್ಧ ಕಾನೂನು ಕ್ರಮ ಜರಗಿಸಲಿದ್ದಾರೆ. ಇದರಿಂದ ಉಂಟಾಗುವ ನಷ್ಟಗಳಿಗೆ ನಗರಸಭೆ ಜವಾಬ್ದಾರಿಯಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ಲಾಸ್ಟಿಕ್ ಚೀಲಗಳ ಬಳಕೆ ಪ್ರಮಾಣ ಅಧಿಕವಾಗಿದ್ದು, ದೈನಂದಿನ ತ್ಯಾಜ್ಯ ವಸ್ತು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಕಷ್ಟವಾಗಿದೆ. ಸಾರ್ವಜನಿಕರು ತಿಂಡಿ, ತಿನಿಸುಗಳನ್ನು ಪ್ಲಾಸ್ಟಿಕ್ ಚೀಲಗಳಿಗೆ ಸುತ್ತಿ ಬಿಸಾಡುತ್ತಿರುವುದರಿಂದ ಇದನ್ನು ತಿನ್ನುವ ಜಾನುವಾರುಗಳ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಅಂಗಡಿ ಮಾಲಕರು ಪ್ಲಾಸ್ಟಿಕ್ ಚೀಲಗಳ ಬಳಕೆ ಮಾಡದಿರುವಂತೆ ನಗರ ಸಭೆ ಆಯುಕ್ತರು ಸೂಚಿಸಿದ್ದಾರೆ.

ಪರಿಸರ ತಜ್ಞರ ಪ್ರಕಾರ, ಇಡೀ ಪ್ರಪಂಚದಲ್ಲಿ ವರ್ಷವೊಂದಕ್ಕೆ 100 ದಶಲಕ್ಷ ಟನ್ ಮತ್ತು ಭಾರತದಲ್ಲಿ 2 ದಶಲಕ್ಷ ಟನ್ ಪ್ಲಾಸ್ಟಿಕ್ ಉತ್ಪಾದನೆಯಾಗುತ್ತಿದೆ. ಅಂದರೆ ಒಬ್ಬ ಮನುಷ್ಯ ಸರಾಸರಿ 3ರಿಂದ 4 ಕೆ.ಜಿ.ಯಷ್ಟು ಪ್ಲಾಸ್ಟಿಕ್ ಬಳಸುತ್ತಿದ್ದಾನೆ. 'ಬೇರೆ ದೇಶಗಳಲ್ಲಿ ಒಬ್ಬ ವ್ಯಕ್ತಿ ಸರಾಸರಿ 60ರಿಂದ 80 ಕೆ.ಜಿ. ಪ್ಲಾಸ್ಟಿಕ್ ಬಳಕೆ ಮಾಡಿದರೂ ಅದನ್ನು ಸಮರ್ಪಕವಾಗಿ ನಾಶಪಡಿಸುತ್ತಾರೆ. ಇಲ್ಲಿ ತ್ಯಾಜ್ಯ ನಿರ್ವಹಣೆ ಕೂಡಾ ಬಗೆಹರಿಯದ ಸಮಸ್ಯೆಯಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X