ಭೂ-ಹಗರಣದ ಬಗ್ಗೆ ಮಾತಾಡಲ್ಲ : ಭಾರದ್ವಾಜ್

ಇಂದಿರಾ ಗಾಂಧಿ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರ ಭೂ ಅಕ್ರಮಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು. ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡಬಾರದು. ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಆದೇಶದಂತೆ ಚುನಾವಣೆ ನಡೆಸಬೇಕು. ಇದಕ್ಕೆ ಆಯೋಗ ಕ್ರಮ ಕೈಗೊಳ್ಳುತ್ತದೆ ಎಂಬ ವಿಶ್ವಾಸವಿದೆ ಎಂದು ಭಾರದ್ವಾಜ್ ತಿಳಿಸಿದರು.












Click it and Unblock the Notifications