ಬಿಜೆಪಿ ಸರಕಾರ ರಾಜ್ಯಕ್ಕೆ ಶಾಪ : ಸಿದ್ದರಾಮಯ್ಯ
ಬೆಂಗಳೂರು,
ನ. 22 : ಜನರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿ ಸರಕಾರ ರಾಜ್ಯಕ್ಕೆ ಶಾಪವಾಗಿ ಪರಿಣಮಿಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. id="toptextpromo">ಬೆಂಗಳೂರಿನಲ್ಲಿ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವರುಗಳು ಹಗರಣಗಳಲ್ಲಿ ಸಿಲುಕಿಕೊಂಡಿದ್ದು, ಈ ಸರಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವುದೇ ಹಕ್ಕಿಲ್ಲ ಎಂದರು. ಮುಖ್ಯಮಂತ್ರಿ ನಡೆಸಿರುವ ಹಗರಣಗಳ ಕುರಿತು ಸಿಬಿಐ ತನಿಖೆಯಾಗಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದರು. id='are-slot-1' class='oiad oi-axt oiadv'> id='top-searched-articles'>ರಾಜ್ಯದಲ್ಲಿ
ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಭಂಡತನದಿಂದ ಅಧಿಕಾರಕ್ಕೆ ಜೋತು ಬಿದ್ದಿದ್ದಾರೆ. ಯಡಿಯೂರಪ್ಪ ಹೈಕಮಾಂಡ್ ಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ನಾಚಿಕೆ ಬಿಟ್ಟು ಅಧಿಕಾರಕ್ಕಾಗಿ ದೊಂಬರಾಟ ನಡೆಸಿರುವ ಯಡಿಯೂರಪ್ಪ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಸಿದ್ದರಾಮಯ್ಯ ಕೆಂಡವಾದರು.











Click it and Unblock the Notifications