ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಸತ್ತಿನಲ್ಲಿ ಕನಕರ ಪುತ್ಥಳಿ ಪ್ರತಿಷ್ಠಾಪನೆಗೆ ಆಗ್ರಹ

By * ಕೆಆರ್ ಸೋಮನಾಥ್, ಶಿವಮೊಗ್ಗ
|
Google Oneindia Kannada News

Bhakta Kanakadasa
ಶಿವಮೊಗ್ಗ, ನ. 23 : ಸಂಸತ್ ಆವರಣದಲ್ಲಿ ಕೇಂದ್ರ ಸರ್ಕಾರ ಉಡುಪಿ ಕೃಷ್ಣನ ದರ್ಶನ ಪಡೆದ ಸಂತ ಕವಿ ಕನಕದಾಸರ ಪುತ್ಥಳಿಯನ್ನು ಪ್ರತಿಷ್ಠಾಪಿಸಬೇಕು ಹಾಗೂ ಅವರ ಗೌರವಾರ್ಥ ಕನಕದಾಸರ ನಾಣ್ಯ ಹಾಗೂ ಸ್ಟ್ಯಾಂಪ್ ಬಿಡುಗಡೆ ಮಾಡಬೇಕೆಂದು ಜಿಲ್ಲಾ ಕನಕ ಯುವಸೇನೆ ಅಧ್ಯಕ್ಷ ಕೆ.ರಂಗನಾಥ್ ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ದಾಸ ಶ್ರೇಷ್ಠರಾದ ಕನಕದಾಸರ ಜಯಂತ್ಯೋತ್ಸವ ನ.24ರಂದು ನಡೆಯಲಿದೆ. ಕನಕ ಯುವಸೇನೆ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಕುರುಬರ ವಿದ್ಯಾರ್ಥಿನಿಲಯದಲ್ಲಿ ಅಂದು ಬೆಳಿಗ್ಗೆ 8.30ಕ್ಕೆ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜಿಲ್ಲಾಡಳಿತ ಆಯೋಜಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ.

ವಿಶ್ವಮಾನವ ಸಂದೇಶ ಸಾರಿದ ದಾಸ ಶ್ರೇಷ್ಠ ಕನಕದಾಸರಿಗೆ ಗೌರವ ಸಲ್ಲಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ವಿಶ್ವಮಾನವ ಬಸವೇಶ್ವರರಂತೆ ಕನಕದಾಸರ ಸ್ಟ್ಯಾಂಪ್, ನಾಣ್ಯ ಬಿಡುಗಡೆ ಮಾಡಿ ಅವರ ಪುತ್ಥಳಿಯನ್ನು ಸಂಸತ್ ಆವರಣದಲ್ಲಿ ಪ್ರತಿಷ್ಠಾಪಿಸಬೇಕು. ಕನಕದಾಸರ ಅಮೂಲ್ಯ ವಸ್ತುಗಳು ಹಾಗೂ ದಾಖಲೆಗಳನ್ನು ಸಂಗ್ರಹಾಲಯವೊಂದನ್ನು ಸ್ಥಾಪಿಸಿ, ಸಂರಕ್ಷಿಸಬೇಕೆಂದು ಮನವಿ ಮಾಡಿದರು.

ಕಾಗಿನೆಲೆಯ ಅಭಿವೃದ್ಧಿ ಕುಂಠಿತವಾಗಿ ಸಾಗುತ್ತಿದೆ. ಸರ್ಕಾರ ಕೋಟಿ ಕೋಟಿ ಹಣ ಬಿಡುಗಡೆ ಮಾಡಿದರೂ ಸರಿಯಾಗಿ ಯಾವುದೇ ಕೆಲಸ ನಡೆಯುತ್ತಿಲ್ಲ. ಕೂಡಲೇ ಸಂಬಂಧಪಟ್ಟ ಇಲಾಖೆ ಹಾಗೂ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡು ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಪ್ರವೀಣ್‌ಕಾಂತ್ (ಎ.ಹೆಚ್.ಸುನೀಲ್), ಕೃಷ್ಣಮೂರ್ತಿ, ಶ್ರೀನಿವಾಸ್, ಶಿವಕುಮಾರ್, ಎಚ್.ಆಂಜನೇಯ ಮತ್ತಿತರರು ಉಪಸ್ಥಿತರಿದ್ದರು.

English summary
Shimoga district Kanaka yuvasene urges installation of Kanakadasa statue in Parliament on his birthday on November 24. It is a public holiday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X