ರಾಜ್ಯಪಾಲರ ಬಳಿಗೆ ಕಾಂಗ್ರೆಸ್ ನಿಯೋಗ

Congress delegation meets Governor
ಬೆಂಗಳೂರು, ನ. 23 : ರಾಜ್ಯರಾಜಕೀಯದ ಮಧ್ಯೆ ಸೋಮವಾರ ಸಂಜೆ ಕಾಂಗ್ರೆಸ್ ನಿಯೋಗವೊಂದು ರಾಜ್ಯಪಾಲರನ್ನು ಭೇಟಿಯಾಗಿ, ಸ್ವಜನಪಕ್ಷಪಾತ, ಭ್ರಷ್ಟಾಚಾರ, ಹಗರಣದ ಸುಳಿಯಲ್ಲಿ ಸಿಲುಕಿರುವ ಸರಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿದೆ.

ಯಡಿಯೂರಪ್ಪ ಸರಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಜಭವನಕ್ಕೆ ತೆರಳಿದ ಕೆಪಿಸಿಸಿ ಅಧ್ಯಕ್ಷ ಡಾ ಜಿ ಪರಮೇಶ್ವರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯರ ನೇತೃತ್ವದ ನಿಯೋಗ ರಾಜ್ಯಪಾಲ ಹಂಸರಾಜ್ ಭಾರದ್ವಾಜ್‌ ರಿಗೆ ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು, ಸರಕಾರದ ಹಗರಣಗಳ ಕುರಿತು ಮನವಿಯನ್ನು ಸಲ್ಲಿಸಿದೆ. ಅಲ್ಲದೆ ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಆಗ್ರಹಿಸಿದೆ.

ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ಅಕ್ರಮಗಳು, ಹಗರಣಗಳು ನಡೆಯುತ್ತಿದೆ. ಇದನ್ನು ತಡೆಯುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಇದರ ನೈತಿಕತೆ ಹೊತ್ತು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಸಂವಿಧಾನ ಬದ್ಧವಾಗಿ ತಾವು ಮಧ್ಯ ಪ್ರವೇಶಿಸಬೇಕೆಂದು ರಾಜ್ಯಪಾಲರನ್ನು ಕಾಂಗ್ರೆಸ್ ಆಗ್ರಹಿಸಿದೆ.

ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಚರ್ಚೆ ನಡೆಸಿದ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸ್ವಜನಪಕ್ಷಪಾತ, ಅಧಿಕಾರ ದುರುಪಯೋಗ, ಸ್ವಾರ್ಥ, ಕಾನೂನು ಬಾಹಿರ ಅಕ್ರಮಗಳು, ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ, ಡಿನೋಟಿಫಿಕೇಶನ್ ಹಗರಣಗಳನ್ನು ನಡೆಸಿರುವ ಯಡಿಯೂರಪ್ಪರ ಕುರಿತು ಸಮಗ್ರವಾದ ಮಾಹಿತಿಯುಳ್ಳ ಮನವಿಯನ್ನು ರಾಜ್ಯಪಾಲರಿಗೆ ಸಲ್ಲಿಸಲಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+