ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಧ್ರಪ್ರದೇಶ : ಸಿಎಂ ಹುದ್ದೆಗೆ ರೋಸಯ್ಯ ರಾಜೀನಾಮೆ

By Mrutyunjaya Kalmat
|
Google Oneindia Kannada News

AP CM K Rosaiah resigns
ಹೈದರಾಬಾದ್, ನ. 24 : ಅನಾರೋಗ್ಯದ ನೆಪವೊಡ್ಡಿ ಆಂದ್ರಪ್ರದೇಶ ಮುಖ್ಯಮಂತ್ರಿ ಕೆ ರೋಸಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.

ಬುಧವಾರ ಮಧ್ಯಾಹ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅನಾರೋಗ್ಯ ಕಾರಣದಿಂದ ಸರಿಯಾಗಿ ಕಾರ್ಯನಿರ್ವಹಿಸಲು ಆಗುತ್ತಿಲ್ಲ. ಹೀಗಾಗಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಅವರು ಹೇಳಿದ್ದಾರೆ.

ಕಳೆದ 14 ತಿಂಗಳುಗಳ ಕಾಲ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿರುವೆ. ರಾಜೀನಾಮೆ ನೀಡು ಎಂದು ಯಾರೂ ನನಗೆ ಒತ್ತಡ ಹೇರಿಲ್ಲ. ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡುತ್ತಿರುವುದಾಗಿ ರೋಸಯ್ಯ ಸ್ಪಷ್ಟಪಡಿಸಿದ್ದಾರೆ. ಆಂಧ್ರಪ್ರದೇಶದ ಕಾಂಗ್ರೆಸ್ ನಲ್ಲಿ ಒಗ್ಗಟ್ಟಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ನನ್ನ ಅರೋಗ್ಯ ಸರಿ ಇರದ ಕಾರಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವೆ ಎಂದು ರೋಸಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣದ ನಂತರ ಕೆ ರೋಸಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ವಿರುದ್ದ ತಿರುಗಿ ಬಿದ್ದಿರುವ ವೈಎಸ್ ಆರ್ ಪುತ್ರ ಜಗನ್ಮೋಹನ್ ರೆಡ್ಡಿ ಒಡೆತನದ ಸಾಕ್ಷಿ ಟಿವಿ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್ ಹಾಗೂ ರೋಸಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು. ಇದರಿಂದ ಮನನೊಂದು ರೋಸಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

English summary
Andhra Pradesh chief minister K Rosaiah announced on Wednesday that he would be quitting on grounds of health. He told reporters that he would submit his resignation to Governor ESL Narasimhan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X