ಯಶವಂತಪುರ ಕ್ಷೇತ್ರಾಭಿವೃದ್ಧಿಯಲ್ಲಿ ಶೋಭಾ ನಿರತ

ಬೆಂಗಳೂರು ದಕ್ಷಿಣ ತಾಲ್ಲೂಕಿನ ಬೆಟ್ಟನಪಾಳ್ಯದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ರೂ 90 ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ರಾಮೋಹಳ್ಳಿ- ಹೊಸಪಾಳ್ಯ, ಬೆಟ್ಟನಪಾಳ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾವರೆಕೆರೆ-ಕೆಂಗೇರಿ ರಸ್ತೆ ಅಭಿವೃದ್ಧಿ: ಬಹು ದಿನಗಳ ಬೇಡಿಕೆಯಾದ ತಾವರೆಕೆರೆ-ಕೆಂಗೇರಿ ರಸ್ತೆಯನ್ನು ರೂ. 12 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗವುದು ಎಂದು ಇಂಧನ ಸಚಿವೆ ಶೋಭಾ ತಿಳಿಸಿದರು.
ಯಶವಂತಪುರ ವಿಧಾನಸಭಾ ಕ್ಷೇತ್ರದ ತಾವರೆಕೆರೆ, ಕೆಂಗೇರಿ ಮತ್ತು ಉತ್ತರಹಳ್ಳಿ ಹೋಬಳಿಗಳಲ್ಲಿ ರೂ. 5.2 ಕೋಟಿ ವೆಚ್ಚದ 32 ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ತಾವರೆಕೆರೆ ಬೆಂಗಳೂರಿಗೆ ಸಮೀಪವಿದ್ದರೂ ಹಲವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಕಳೆದೆರೆಡು ವರ್ಷಗಳಿಂದ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ವಿದ್ಯುತ್ ಸಮಸ್ಯೆ ಎದುರಿಸುತ್ತಿರುವ ತಾವರೆಕೆರೆಗೆ ಇನ್ನು ಮುಂದೆ 24 ಗಂಟೆ ನಿರಂತರವಾಗಿ ವಿದ್ಯುತ್ ನೀಡಲಾಗುವುದು ಎಂದು ಅವರು ಹೇಳಿದರು.
ರೈಲ್ವೆ ಇಲಾಖೆ ಸಹಕಾರದೊಂದಿಗೆ ಕುಂಬಳಗೋಡು ಬಳಿ ರೈಲ್ವೆ ಕ್ರಾಸಿಂಗ್‌ನಲ್ಲಿ ಮೇಲ್ಸೇತುವೆ ನಿರ್ಮಿಸಲಾಗುವುದು. ಇದರಿಂದ ದೊಡ್ಡ ಆಲದಮರ, ಮಂಚನಬೆಲೆ ಮುಂತಾದ ಕಡೆಸಂಪರ್ಕಿಸಲು ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಕ್ಷೇತ್ರದಲ್ಲಿ ಕುಡಿಯುವ ನೀರು, ರಸ್ತೆ, ವಿದ್ಯುತ್ ಸಮಸ್ಯೆಗಳಿದ್ದು ಹಂತ ಹಂತವಾಗಿ ಬಗೆ ಹರಿಸುತ್ತೇನೆ" ಎಂದು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಹುಲುವೇನಹಳ್ಳಿ, ಎಸ್.ಗೊಲ್ಲಹಳ್ಳಿ, ಕುರುಬರಪಾಳ್ಯ, ನಾಗನಾಯಕನಹಳ್ಳಿ, ಅಂಚೆಪಾಳ್ಯ, ಹಳೇಭೈರೋಹಳ್ಳಿ, ಸೂಲಿಕೆರೆ, ಕೆಂಚನಪುರ, ತಾವರೆಕೆರೆ, ಚುಂಚನಗುಪ್ಪೆ, ರಾಮೋಹಳ್ಳಿ, ಚನ್ನೆನಹಳ್ಳಿ, ಹೊನ್ನಿಗನಹಟ್ಟಿ ಮುಂತಾದ ಗ್ರಾಮಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಶಾಲಾ ಕಟ್ಟಡ, ರಸ್ತೆ ಮೊದಲಾದ ಅಭಿವೃದ್ಧಿ ಕಾಮಗಾರಿಗಳನ್ನು ಸಚಿವರು ಉದ್ಘಾಟಿಸಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications