ಜೆಪಿ ನಗರ ಸ್ಲಮ್ ಬಳಿ ಡಬ್ಬಲ್ ಮರ್ಡರ್

ಮೃತರಿಬ್ಬರು ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳಾಗಿದ್ದು. ಇವರ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ರೌಡಿ ಷೀಟರ್ ಎಂದು ಪ್ರಕರಣಗಳು ದಾಖಲಾಗಿದ್ದವು ಎಂದು ಜೆ.ಪಿ.ನಗರ ಪೊಲೀಸರು ತಿಳಿಸಿದ್ದಾರೆ.
ರಾತ್ರಿ 9 ಗಂಟೆ ಸುಮಾರಿಗೆ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ದೇವ 'ಬಾರ್‌ನಲ್ಲಿ ಗಲಾಟೆಯಾಗಿದ್ದು, ನಾನು ಕೆಲವರ ಮೇಲೆ ಹಲ್ಲೆ ನಡೆಸಿದ್ದೇನೆ. ಸ್ವಲ್ಪ ಸಮಯದಲ್ಲೇ ಮನೆಗೆ ಬರುತ್ತೇನೆಂದು ತಿಳಿಸಿದ್ದ" ಎಂದು ವಿಚಾರಣೆಯಿಂದ ಗೊತ್ತಾಗಿದೆ. ಆತನಿಂದ ಹಲ್ಲೆಗೊಳಗಾದ ವ್ಯಕ್ತಿಗಳೇ ಈ ಕೃತ್ಯ ಎಸಗಿರುವ ಶಂಕೆ ಇದೆ ಎಂದು ಪೊಲೀಸರು ಹೇಳಿದ್ದಾರೆ.
ಕೊಲೆ ಆರೋಪಿಗಳ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪರಾಧ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಅಲೋಕ್‌ಕುಮಾರ್, ದಕ್ಷಿಣ ವಿಭಾಗದ ಡಿಸಿಪಿ ಸೋನಿಯಾ ನಾರಂಗ್, ಇನ್‌ಸ್ಪೆಕ್ಟರ್ ಎಸ್.ಕೆ.ಉಮೇಶ್, ಎಸ್‌ಐ ಮನೋಜ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.












Click it and Unblock the Notifications