ಕೃಷ್ಣಾ ಮೇಲ್ದಂಡೆ ಅಕ್ರಮ, ಗೌಡ್ರ ಮೇಲೆ ಸಿಐಡಿ ತನಿಖೆ
ಬೆಂಗಳೂರು,
ನ.30: ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ತುಂಡು ಗುತ್ತಿಗೆ ಕಾಮಗಾರಿಗಳಲ್ಲಿ 85 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಬಗ್ಗೆ ಸಿಐಡಿ ತನಿಖೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರೆ ತನಿಖೆ ಪೂರ್ಣಗೊಳಿಸಿ ವರದಿ ನೀಡಲು ಕಾಲಮಿತಿ ನಿಗದಿ ಮಾಡಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ವಿಎಸ್ ಆಚಾರ್ಯ ತಿಳಿಸಿದ್ದಾರೆ. id="toptextpromo">ಕೃಷ್ಣಾ
ಮೇಲ್ದಂಡೆ ಯೋಜನೆಯಲ್ಲಿ ಅವ್ಯವಹಾರ, ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಾರ್ವಜನಿಕವಾಗಿಯೂ ಚರ್ಚೆಯಾಗಿತ್ತು. ಮಾಜಿ ಸಚಿವ ವೈಜನಾಥ್ ಪಾಟೀಲ ಮತ್ತು ದಾತಾರ್ ಸಮಿತಿ ಸಹ ಈ ಬಗ್ಗೆ ಪ್ರಸ್ತಾಪಿಸಿತ್ತು. ಅಲ್ಲದೆ ಸೋಮಶೇಖರ ರೆಡ್ಡಿ ಎನ್ನುವವರು ಕಳೆದ ಜನವರಿಯಲ್ಲಿ ಈ ವಿಷಯವನ್ನು ಹೈಕೋರ್ಟ್‌ಗೆ ತೆಗೆದುಕೊಂಡು ಹೋಗಿದ್ದರು. ನ್ಯಾಯಾಲಯ ಈ ಬಗ್ಗೆ ತನಿಖೆ ನಡೆಸಬಹುದು ಎಂದು ಫೆಬ್ರವರಿಯಲ್ಲಿ ತೀರ್ಪು ನೀಡಿದೆ. id='are-slot-1' class='oiad oi-axt oiadv'> id='top-searched-articles'>ಹೀಗಾಗಿ
ತುಂಡು ಗುತ್ತಿಗೆ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನಿಸಲಾಗಿದೆ. 1994-96ರ ಅವಧಿಯಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮದ ವಿವಿಧ ಕಾಮಗಾರಿಗಳಲ್ಲಿ ಒಟ್ಟು 85 ಕೋಟಿ ರೂಪಾಯಿ ಅವ್ಯವಹಾರ ಆಗಿದೆ. ಈ ಪೈಕಿ ಲೋಕೋಪಯೋಗಿ ಇಲಾಖೆಯು ಟೆಂಡರ್ ಕರೆಯುವಾಗ ಕೋಡ್ ಉಲ್ಲಂಘನೆ ಮಾಡಿರುವುದರಿಂದ 73 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಮಹಾಲೆಕ್ಕಪಾಲರ ವರದಿಯಲ್ಲಿ ಪ್ರಸ್ತಾಪಿಸಿರುವುದು ಪ್ರಮುಖವಾಗಿದೆ ಎಂದು ಆಚಾರ್ಯ ಹೇಳಿದರು.











Click it and Unblock the Notifications