ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ : ಧ್ವನಿ ಬೆಳಕಿನಲ್ಲಿ ವಿಜಯನಗರದ ವೈಭವ

By * ಕೆಆರ್ ಸೋಮನಾಥ್, ಶಿವಮೊಗ್ಗ
|
Google Oneindia Kannada News

Ponnu Raj, Shivamogga DC
ಶಿವಮೊಗ್ಗ, ಡಿ. 1 : ವಿಜಯನಗರದ ಅರಸ ಶ್ರೀ ಕೃಷ್ಣದೇವರಾಯರ 500ನೇ ವರ್ಷದ ಪೀಠಾರೋಹಣ ಸಮಾರಂಭ ಆಚರಣೆಯ ಸ್ಮರಣಾರ್ಥವಾಗಿ ಸರ್ಕಾರವು ರಾಜ್ಯದ 20 ಜಿಲ್ಲೆಗಳಲ್ಲಿ ಧ್ವನಿ-ಬೆಳಕು ವಿಶೇಷ ಕಾರ್ಯಕ್ರಮವನ್ನು ಪ್ರವಾಸೋದ್ಯಮ ಇಲಾಖೆಯ ನೇತೃತ್ವದಲ್ಲಿ ಪ್ರಸ್ತುತಪಡಿಸುತ್ತಿದೆ.

ಶಿವಮೊಗ್ಗದಲ್ಲಿ ಡಿಸೆಂಬರ್ 4 ಮತ್ತು 5ರಂದು ಪ್ರತಿದಿನ ಸಂಜೆ 7.30ರಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪೊನ್ನುರಾಜ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಅವರು ಮಾತನಾಡುತ್ತಿದ್ದರು.

ಈ ಕಾರ್ಯಕ್ರಮ ವಿಶೇಷ ರೀತಿಯಲ್ಲಿ ರೂಪುಗೊಂಡಿದ್ದು, ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ನೆನಪಿಸಲಿದೆ ಎಂದ ಅವರು, ವಿಜಯನಗರದ ವಿರೂಪಾಕ್ಷ ದೇವಾಲಯ, ಕಲ್ಲಿನರಥ, ಸಾಸಿವೆಕಾಳು ಗಣಪ, ಕಡಲೆಕಾಳು ಗಣಪ, ವಿಜಯ ವಿಠ್ಠಲ ದೇವಾಲಯ, ನರಸಿಂಹ, ಕಲ್ಯಾಣಿ ಮತ್ತು ಹಂಪೆಯ ದೃಶ್ಯ ವೈಭವಗಳು ಧ್ವನಿ-ಬೆಳಕಿನಲ್ಲಿ ಅತ್ಯಾಕರ್ಷಕವಾಗಿ ಮೂಡಿಬರಲಿವೆ ಎಂದರು.

ಎರಡು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದ ಸೊಬಗನ್ನು ಸಾರ್ವಜನಿಕರು ನೋಡಿ ಆನಂದಿಸಬೇಕು ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಂಗಯ್ಯ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಹುಸೇನಿ, ವಿವೇಕಾನಂದ, ವೈದ್ಯ ಮುಂತಾದವರು ಉಪಸ್ಥಿತರಿದ್ದರು.

English summary
On the occasion of 500th year of pattabhisheka of vijayanagar king sri krishnadevaraya government is celebrating the event in shivamogga on december 4 and 5.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X