ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಳ್ಳಾರಿಗೆ ಸಂಚಾರಿ ಪೊಲೀಸ್ ಠಾಣೆ ಬೇಕು: ಎಸ್ಪಿ

By * ರೋಹಿಣಿ, ಬಳ್ಳಾರಿ
|
Google Oneindia Kannada News

Bellary police rally
ಬಳ್ಳಾರಿ, ಡಿ.3: ಬಳ್ಳಾರಿ ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ವಾಹನಗಳ ದಟ್ಟನೆ ಆಧರಿಸಿ ಹೆಚ್ಚುವರಿ ಸಂಚಾರಿ ಪೊಲೀಸ್ ಠಾಣೆ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ನಾಗರಾಜ್ ಅವರು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಗುರುವಾರ ನಡೆದ 'ಅಪರಾಧ ತಡೆ ಮಾಸಾಚರಣೆ" ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂಡೂರು ತಾಲೂಕಿನ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಮೇಲ್ದರ್ಜೆಗೇರಿಸಲು ಕೂಡ ಪ್ರಸ್ತಾವನೆ ಸಲ್ಲಿಸಲಾಗಿದೆ. ತೀವ್ರವಾದ ಗಣಿ ಚಟುವಟಿಕೆ, ಕೈಗಾರಿಕೆಗಳ ಅಭಿವೃದ್ಧಿ ಹಿನ್ನಲೆಯಲ್ಲಿ ಈ ಠಾಣೆಯನ್ನು ಮೇಲ್ದರ್ಜೆಗೇರಿಸುವ ಅಗತ್ಯ ಇದೆ ಎಂದು ಅವರು ಹೇಳಿದರು.

ಜನಸ್ನೇಹಿ ಪೊಲೀಸ್: ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರ ದೂರನ್ನು ಸ್ವೀಕರಿಸಿದ ಪೊಲೀಸ್ ಸಿಬ್ಬಂದಿ ಜನರಲ್ಲಿ ವಿಶ್ವಾಸ, ನಂಬಿಕೆ ಮತ್ತು ಭರವಸೆ ಮೂಡಿಸಬೇಕು. ಜನರು - ಇಲಾಖೆ ಸದಾಕಾಲ ಉತ್ತಮವಾಗಿರಬೇಕು. ಅಪರಾಧ ತಡೆ ಮಾಸಾಚರಣೆ ಹಿನ್ನಲೆಯಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸಲಾಗುತ್ತದೆ ಎಂದರು.

ಮೆರವಣಿಗೆಗೆ ಚಾಲನೆ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಜಿಲ್ಲಾ ಪೊಲೀಸ್ ಆಯೋಜಿಸಿದ್ದ ರ‌್ಯಾಲಿಯನ್ನು ಎಸ್ಪಿ ಅವರು ಚಾಲನೆ ನೀಡಿ, ವಿದ್ಯಾರ್ಥಿಗಳು ಪೊಲೀಸ್ ಇಲಾಖೆಯ ಧ್ಯೇಯ, ಗುರಿಯನ್ನು ಜನಸಾಮಾನ್ಯರಿಗೆ ತಲುಪಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು. ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಜಾಥಾದ ಜೊತೆ ಜೊತೆಯಲ್ಲಿ ಎಸ್ಪಿ ಎಂ.ಎನ್. ನಾಗರಾಜ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X