ಬೀದರ್‌ನಲ್ಲಿ ಭೀಕರ ಅಪಘಾತ; 13 ಮಂದಿ ದುರ್ಮರಣ
ಈಶಾನ್ಯ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಎನ್ ಇಕೆಎಸ್‌ಆರ್‌ಟಿಸಿ) ಬಸ್ಸು ಹಾಗೂ ಕಾರಿನ ನಡುವೆ ಸಂಭವಿಸಿದಮುಖಾಮುಖಿ ಡಿಕ್ಕಿಯ ಪರಿಣಾಮ 13 ಮಂದಿ ಸ್ಥಳದಲ್ಲೇ ಮೃತಪಟ್ಟು ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಬೀದರ್‌ನಿಂದ 22 ಕಿ.ಮೀ ದೂರದಲ್ಲಿರುವ ಕೊಪ್ಪರ್‌ಗೋನ್ ಎಂಬಲ್ಲಿ ಶನಿವಾರ ಮುಂಜಾನೆ ಈ ಘಟನೆ ನಡೆದಿದೆ. id="toptextpromo">ಮೃತಪಟ್ಟವರೆಲ್ಲರೂ
ಮಹಾರಾಷ್ಟ್ರದ ಲಾತೂರಿಗೆ ಸೇರಿದವರಾಗಿದ್ದಾರೆ. ಇವರೆಲ್ಲಾ ತಿರುಪತಿಯಿಂದ ಸ್ವಕ್ಷೇತ್ರಕ್ಕೆ ಹಿಂತಿರುಗುತ್ತಿದ್ದರು ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಸತೀಶ್ ಕುಮಾರ್ ತಿಳಿಸಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತ ದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಗಾಯಗೊಂಡವರಲ್ಲಿ
ಇಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ಬಸ್ಸು ಬಸವಕಲ್ಯಾಣದಿಂದ ಹೈದರಾಬಾದ್‌ಗೆ ಹೋರಟಿತ್ತು ಎಂದು ಬೀದರ್ ಪೊಲೀಸ್ ಮೂಲಗಳು ತಿಳಿಸಿವೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹುಮಾನಾಬಾದ್ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.











Click it and Unblock the Notifications