Get Updates
Get notified of breaking news, exclusive insights, and must-see stories!

ಭೂಹಗರಣದ ನ್ಯಾಯಾಂಗ ತನಿಖೆ ಸರಿಯಲ್ಲ

Land scam HR Bhardwaj criticizes judicial probe
ಬೆಂಗಳೂರು, ಡಿ. 5 : ರಾಜ್ಯದಲ್ಲಿ ನಡೆದಿರುವ ಭೂ ಹಗರಣಗಳನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವ ಮೂಲಕ ರಾಜ್ಯದ ಜನತೆಯಲ್ಲಿ ಗೊಂದಲವುಂಟು ಮಾಡಲಾಗುತ್ತಿದೆ ಎಂದು ರಾಜ್ಯಪಾಲರ ಎಚ್ ಆರ್ ಭಾರದ್ವಾಜ್ ಸರಕಾರವನ್ನು ಮತ್ತೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾನುವಾರ ರಾಜಭವನದ ಮುಂಭಾಗದಲ್ಲಿ ಆಯುರ್ವೇದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು . ಭೂಹಗರಣಗಳನ್ನು ನ್ಯಾಯಾಂಗ ತನಿಖೆಗೆ ವಹಿಸುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕ್ರಮ ಸರಿಯಿಲ್ಲ ಎಂದು ಅವರು ಟೀಕಿಸಿದರು.

ಭೂಹಗರಣಗಳ ಬಗ್ಗೆ ಲೋಕಾಯುಕ್ತರು ತನಿಖೆ ನಡೆಸುವುದರಲ್ಲಿ ತಪ್ಪಿಲ್ಲ. 1993ರಲ್ಲಿ ನಾರಾಯಣ ಎಂಬುವವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನವನ್ನು ಪ್ರಸ್ತಾಪಿಸಿದ ರಾಜ್ಯಪಾಲರು ಯಾವುದೇ ಭ್ರಷ್ಟಾಚಾರ ಪ್ರಕರಣವನ್ನು ಪೊಲೀಸರ ಜೊತೆಗೆ ಲೋಕಾಯುಕ್ತರೂ ನಡೆಸಬಹುದಾಗಿದೆ. ಸರಕಾರ ಉದ್ದೇಶಪೂರ್ವಕವಾಗಿಯೇ ಭೂಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಅಪನಂಬಿಕೆ ಸಲ್ಲದು : ಭ್ರಷ್ಟಾಚಾರವನ್ನು ತಡೆಗಟ್ಟಲು ಲೋಕಾಯುಕ್ತ ಸಂಸ್ಥೆಯನ್ನು ಹುಟ್ಟುಹಾಕಿ ಅಗ ಅದಕ್ಕೆ ಕಡಿವಾಣ ಹಾಕುವುದು ಸರಿಯಲ್ಲ. ಲೋಕಾಯುಕ್ತ ಸಂಸ್ಥೆ ಬಗ್ಗೆ ಅಪನಂಬಿಕೆ ಇಟ್ಟುಕೊಳ್ಳಬಾರದು. ರಾಜ್ಯದ ರಾಜ್ಯಪಾಲರಾಗಿ ರಾಜ್ಯದಲ್ಲಿ ನಡೆಯುತ್ತಿರುವ ವಿಷಯಗಳ ಬಗ್ಗೆ ಪ್ರತಿ ತಿಂಗಳು ರಾಷ್ಟ್ರಪತಿಯವರಿಗೆ ವರದಿ ಕಳುಹಿಸುವುದು ನನ್ನ ಕಾನೂನುಬದ್ಧ ಕರ್ತವ್ಯ ಎಂದರು.

ರಾಜ್ಯಪಾಲರಾಗಿ ಕರ್ನಾಟಕಕ್ಕೆ ಬಂದಾಗಿನಿಂದಲೂ ಉತ್ತನ ಕೆಲಸ ಮಾಡಿದ್ದೇನೆ. ಆದರೆ, ನನ್ನ ಈ ಕೆಲಸದ ಬಗ್ಗೆ ಕೆಲವರು ತಿರುಗಿ ಬಿದ್ದರು. ನನ್ನನ್ನು ತೆಗೆದು ಹಾಕುವ ಕೆಲಸಕ್ಕೂ ಕೈಹಾಕಿದರು. ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತು ನಾನು ಅನುಸರಿದ ಕ್ರಮದ ಬಗ್ಗೆ ಕೆಲವರು ಆಕ್ರೋಶ ವ್ಯಕ್ತಪಡಿಸಿದರು. ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಭಾರದ್ವಾಜ್ ಅಭಿಪ್ರಾಯಪಟ್ಟರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+