ಪರದೇಶಿ ಭಿಕ್ಷುಕರನ್ನು ಹೊರ ಹಾಕಲು ಚಿಂತನೆ

ರಾಜ್ಯದಲ್ಲಿರುವ ನಿರಾಶ್ರಿತರ ಪುನರ್ವಸತಿ ಕೇಂದ್ರಗಳಲ್ಲಿ ಒಟ್ಟು 918 ಮಂದಿ ನಿರಾಶ್ರಿತರಿದ್ದಾರೆ. ಅವರಲ್ಲಿ ಶೇ. 75 ರಷ್ಟು ಹೊರರಾಜ್ಯದವರು ಆಗಿದ್ದಾರೆ ಎಂದರು. ರಾಜ್ಯದಲ್ಲಿ ಭಿಕ್ಷಾಟನೆಯನ್ನು ನಿರ್ಮೂಲನೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಡಿಸೆಂಬರ್ 20 ರಂದು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ಏರ್ಪಡಿಸಲಾಗುತ್ತದೆ. ರಾಜ್ಯದಲ್ಲಿ ಭಿಕ್ಷಾಟನೆಯನ್ನು ಸಂಪೂರ್ಣ ನಿರ್ಮೂಲನೆ ಮಾಡಲಾಗುತ್ತದೆ ಎಂದರು.
ಬೆಂಗಳೂರು ಕೇಂದ್ರ ಕಚೇರಿ ಸೇರಿದಂತೆ 14 ನಿರಾಶ್ರಿತರ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ಉತ್ತಮ ಗುಣಮಟ್ಟದ ಉಪಹಾರ, ಊಟ, ಸ್ನಾನಕ್ಕೆ ಬಿಸಿ ನೀರು, ಹಾಸಿಗೆ, ಮಂಚಗಳು ಸೇರಿದಂತೆ ಉತ್ತಮ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಅವರು ತಿಳಿಸಿದರು.
ಭಿಕ್ಷಾಟನೆ ನಿರ್ಮೂಲನೆ ಕಾಯ್ದೆಯಡಿ ಎಲ್ಲಾ ಸ್ಥಳೀಯ ಸಂಸ್ಥೆಗಳಿಂದ ಕರ ಸಂಗ್ರಹ ಮಾಡಲಾಗುತ್ತಿದ್ದು, ಪ್ರತಿಯೊಂದು ಸಂಸ್ಥೆ ಕೂಡ ಸಂಗ್ರಹ ಆಗಿರುವ ಕರವನ್ನು ತಮ್ಮ ಖಾತೆಗೆ ಪಾವತಿ ಮಾಡಬೇಕು ಎಂದು ಕೋರಿ ಪತ್ರವ್ಯವಹಾರ ನಡೆಸಲಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು.












Click it and Unblock the Notifications