ವಿಶ್ವಕಪ್ ಕ್ರಿಕೆಟ್ : ವಿದ್ಯಾರ್ಥಿಗಳಿಗೆ ಉಚಿತ ಟಿಕೆಟ್
ನವದೆಹಲಿ,
ಡಿ. 10: ಮುಂಬರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯಾವಳಿಗಳನ್ನು ವೀಕ್ಷಿಸಲು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಟಿಕೆಟ್‌ಗಳನ್ನು ನೀಡಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದೆ. id="toptextpromo">ಉಚಿತ
ಟಿಕೆಟ್ ನೀಡಲು ಪ್ರಾಯೋಜಕರ ಮತ್ತು ಗಣ್ಯರ ಜೊತೆ ಮಾತುಕತೆ ನಡೆಸಲಾಗುವುದು. ನಂತರವಷ್ಟೇ ಎಷ್ಟು ವಿದ್ಯಾರ್ಥಿಗಳಿಗೆ ಟಿಕೆಟ್ ನೀಡಬೇಕು ಎನ್ನುವುದರ ಬಗ್ಗೆ ತೀರ್ಮಾನಕ್ಕೆ ಬರಲಾಗುವುದು ಎಂದು ವಿಶ್ವಕಪ್ ಟೂರ್ನಿಯ ನಿರ್ದೇಶಕ ಮತ್ತು ಬಿಸಿಸಿಐನ ಮುಖ್ಯ ಆಡಳಿತಾಧಿಕಾರಿಯೂ ಆದ ರತ್ನಾಕರ್ ಶೆಟ್ಟಿ ಹೇಳಿದ್ದಾರೆ. ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೂ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಎಲ್ಲೆಡೆ ಉಚಿತ ಟಿಕೆಟ್ ನೀಡಲಾಗುವುದು" ಎಂದರು. id='are-slot-1' class='oiad oi-axt oiadv'> id='top-searched-articles'>ವಿಶ್ವಕಪ್
ಟೂರ್ನಿಯ ಪಂದ್ಯಗಳು ನಡೆಯುವ ಚೆನ್ನೈ, ಮುಂಬೈ ಮತ್ತು ಕೋಲ್ಕತ್ತದ ಕ್ರಿಕೆಟ್ ಕ್ರೀಡಾಂಗಣಗಳಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ICC)ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಅವರು ತಿಳಿಸಿದರು. ವಿಶ್ವಕಪ್ ಟೂರ್ನಿಗೆ ಫೆಬ್ರವರಿ 19ರಂದು ಢಾಕಾದಲ್ಲಿ ಚಾಲನೆ ದೊರೆಯಲಿದೆ.











Click it and Unblock the Notifications