• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಿಲ್ ಮೇಡ್ ಐಡಿ ಮೂಲಕ ಬಿಲ್ ಪಾವತಿ ಅತಿಸರಳ

By Mahesh
|

ಮಂಗಳೂರು, ಡಿ. 12: ಮಾಹಿತಿ ತಂತ್ರಜ್ಞಾನ ಅಭಿವೃದ್ಧಿ ಲಾಭ ಪಡೆದಿರುವ ಸ್ಥಳೀಯ ಯುವ ಟೆಕ್ಕಿಗಳ ತಂಡ ಬಿಲ್ ಪಾವತಿ ಮಾಡಲು ಜನಸಾಮಾನ್ಯರು ಪಡುವ ಪಾಡನ್ನು ಹೋಗಲಾಡಿಸಲು "ಬಿಲ್ ಮೇಲ್ ಐಡಿ" ಎಂಬ ವೆಬ್ ಪೋರ್ಟಲ್ ಗೆ ಡಿ.13ರಂದು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಬಿಲ್ ಪಾವತಿ ಅಷ್ಟೇ ಅಲ್ಲದೆ, ಇ ವಾಣಿಜ್ಯ ಉದ್ಯಮಿಗಳು, ಮಾರಾಟಗಾರರು ಇತರೆ ಗ್ರಾಹಕರಿಗೂ ಈ ತಾಣ ಅನುಕೂಲವಾಗಲಿದೆ. ಬ್ಯಾಂಕ್ ಹಾಗೂ ಜನಸಮಾನ್ಯರ ನಡುವಿನ ಸಂಪರ್ಕ ಕೊಂಡಿಯಾಗಿರುವ ಈ ತಾಣ ವಿಶ್ವದ ಪ್ರಪ್ರಥಮ ವಾಣಿಜ್ಯ ನೆಟ್ ವರ್ಕಿಂಗ್ ಸಾಧನವಾಗಲಿದೆ ಎಂದು ಬಿಲ್ ಮೇಲ್ ಐಡಿ ಸ್ಥಾಪಕ ಪಿಸಿ ಹಾಶೀರ್.

ಬಿಲ್ ಪಾವತಿ ಅತಿ ಸರಳ: ಬಿಲ್ ಮೇಲ್ ಐಡಿಯನ್ನು ಪ್ರತಿಯೊಬ್ಬ ವ್ಯಕ್ತಿಯೂ ಸರಳವಾದ ರೀತಿಯಲ್ಲಿ ಪಡೆದುಕೊಳ್ಳಬಹುದಾಗಿದೆ. ಬಿಲ್ ಮೇಲ್ ಐಡಿ ಪಡೆದ ಬಳಕೆದಾರ ನೀರು, ವಿದ್ಯುತ್ ಹಾಗೂ ಇನ್ನಿತರ ಸಂಸ್ಥೆಗಳ ಬಿಲ್ ಪಾವತಿಯನ್ನು ಸರಳ ವಿಧಾನದಿಂದ ಮಾಡಬಹುದು. ಮೊಬೈಲ್, ಕಂಪ್ಯೂಟರ್, ಬ್ಯಾಂಕ್ ಕೌಂಟರ್, ಎಟಿಎಂ, ಕಿಯೋಸ್ಕ್, ತೃತೀಯ ಪಕ್ಷದ ಫ್ರಾಂಚೈಸಿ ಮುಂತಾದ ಸ್ಥಳಗಳಲ್ಲಿ ಬಿಲ್ ಮೇಲ್ ಐಡಿ ಮೂಲಕ ಗ್ರಾಹಕರು ಬಿಲ್ ಪಾವತಿಸಬಹುದಾಗಿದೆ.

ಬ್ಯಾಂಕ್‌ಗಳು ಹಾಗೂ ಇತರ ಹಣಕಾಸು ಸಂಸ್ಥೆಗಳೊಂದಿಗೆ ಬಿಲ್ ಮೇಲ್ ಐಡಿ ಹಲವು ಒಪ್ಪಂದಗಳು ಮತ್ತು ಒಡಂಬಡಿಕೆಗಳನ್ನು ಮಾಡಿಕೊಳ್ಳಲಿದ್ದು, ಈ ತಾಣದಲ್ಲಿ ನೋಂದಾಯಿಸಿಕೊಂಡ ಗ್ರಾಹಕರು ವಿವಿಧ ಬಿಲ್ಲಿಂಗ್ ಏಜೆನ್ಸಿಗಳು ಮತ್ತು ಸೇವೆ ನೀಡುವವರಿಗೆ ಬಿಲ್ ಮೇಲ್ ಐಡಿ ಮೂಲಕ ಬಿಲ್‌ಗಳನ್ನು ಪಾವತಿಸಬಹುದು. ಬಿಲ್ ಪಾವತಿದಾರರಿಗೆ ಬಿಲ್‌ಮೇಲ್ ಐಡಿ ಉಚಿತವಾಗಿ ಈ ಸೇವೆ ನೀಡುತ್ತದೆ ಎಂದು ಹಾಶಿರ್ ತಿಳಿಸಿದರು.

ಇ ವಾಣಿಜ್ಯಕ್ಕೂ ಅನುಕೂಲ: ವ್ಯಾಪಾರಿಗಳು ತಮ್ಮ ಸಂಸ್ಥೆಗೆ ಸಂಬಂಧಿಸಿದ ಬಿಲ್‌ಗಳನ್ನು ತಯಾರಿಸಲು ಬಿಲ್‌ಮೇಲ್ ಐಡಿ ಯನ್ನು ಉಪಯೋಗಿಸಬಹುದಾಗಿದ್ದು, ಇದು ಪ್ರಸಕ್ತ ಲಭ್ಯವಿರುವ ಎಲ್ಲ ಅಕೌಂಟಿಂಗ್ ಸಾಫ್ಟ್‌ವೇರ್‌ಗೂ ಸಂಪರ್ಕಿತವಾಗಿದೆ. ಉಚಿತವಾಗಿ ಡೌನ್‌ಲೋಡ್ ಮಾಡಬಲ್ಲಂತಹ ಬಿಲ್ಲಿಂಗ್ ಸಾಫ್ಟ್‌ವೇರ್ ಆವೃತ್ತಿ ಇದರಲ್ಲಿ ಲಭ್ಯವಿದೆ. ಇದನ್ನು ಆಫ್‌ಲೈನಮ್ ಬಳಕೆಗೆ ಬಳಸಿಕೊಳ್ಳಬಹುದಾಗಿದೆ. ಜಗತ್ತಿನ ಎಲ್ಲರೂ ಬಿಲ್ ಮೇಲ್ ಐಡಿ ಸಮುದಾಯದ ಸದಸ್ಯರಾಗಬಹುದು. ಬಿಲ್‌ಮೇಲ್ ಐಡಿ ಸದಸ್ಯ ಇನ್ನೊಬ್ಬ ಬಿಲ್‌ಮೇಲ್ ಐಡಿ ಸದಸ್ಯನಿಗೆ ಪರ್ಚೆಸ್ ಆರ್ಡರ್, ಬಿಲ್ ನೀಡುವಿಕೆ, ಬಿಲ್ ಹಣಪಾವತಿ, ವಸ್ತುವಿನ ಬಟವಾಡೆ ಮೊದಲಾದ ವಾಣಿಜ್ಯ ಪ್ರಕ್ರಿಯೆಗಳನ್ನು ಸರಳವಾಗಿ ನಡೆಸಬಹುದಾಗಿದೆ ಎಂದು ಹಾಶಿರ್ ಮಾಹಿತಿ ನೀಡಿದರು.

ಪ್ರತಿಭಾವಂತರ ದಂಡು : ಕಳೆದ 2009ರ ಬಳಿಕ ಎನ್‌ಐಟಿಕೆ ಇಂಜಿನಿಯರ್ ಪದವೀಧರನಾದ ಹಾಶೀರ್ ನೇತೃತ್ವದಲ್ಲಿ ಸಾಫ್ಟ್‌ವೇರ್ ತಾಂತ್ರಿಕ ಪರಿಣತರಾದ ಉನ್ನಿಕೋರತ್, ಅರವಿಂದ ಜಿ.ಎಸ್., ಪ್ರವೀಣ್ ಪ್ರಭು, ಪಿ.ಸಿ. ರಯೀಝ್, ನೌಶೀನ್, ಅಬ್ದುಲ್ ಸಲಾಂ ತಂಡ ಈ ಉತ್ಪನ್ನವನ್ನು ಬಿಲ್‌ಮೇಲ್ ಐಡಿ ಅಪ್ಲಿಕೇಶನ್ 'ಮೆ. ಬಿಲ್ ಮೇಲ್ ಐಡಿ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ಮತ್ತು ಮೆ.ಫೊರಾಡಿಯನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಜಂಟಿಯಾಗಿ ಅಭಿವೃದ್ಧಿ ಪಡಿಸಿದೆ ಎಂದು ಪಿ.ಸಿ.ಹಾಶಿರ್ ತಿಳಿಸಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
BillMailID is a bill management portal(World"s first commercial networking site)through which public can create, receive, send, manage, print, store and pay their bills from personal computers or mobile phones. We intend to make BillMailID free of cost to public said Mangalore based techie, founder and chairmen of BillMailD PC Hashir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more