ದಿಲ್ಲಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್
ನವದೆಹಲಿ,
ಡಿ. 12 : ದೇಶದ ರಾಜಧಾನಿ ನವದೆಹಲಿಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರದಂತಹ ಪೈಶಾಚಿಕ ಘಟನೆ ಇಲ್ಲಿನ ಈಶಾನ್ಯ ಪ್ರದೇಶದ ಸುಲ್ತಾನಪುರಿ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ಕುಮಂದಿಯನ್ನು ದಿಲ್ಲಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. id="toptextpromo">ಶನಿವಾರ
ಕಚೇರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವತಿಯನ್ನು ಕಾರಿನಲ್ಲಿ ಬಂದ ಆರೋಪಿಗಳ ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ಆರಂಭಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಇತ್ತೀಚೆಗೆ
ನವದೆಹಲಿಯಲ್ಲಿ ಬಿಪಿಒ ಉದ್ಯೋಗಿ ಮಣಿಪುರದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಆಕೆಯನ್ನು ಯುವಕರ ತಂಡ ಕಾರಿನಲ್ಲೇ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದರು. ಈ ಘಟನೆ ನಂತರ ಮತ್ತೊಂದು ಗ್ಯಾಂಗ್ ರೇಪ್ ನಡೆದಿರುವುದು ರಾಜಧಾನಿಯಲ್ಲಿ ಮಹಿಳೆಯರ ಭದ್ರತೆ ಬಗ್ಗೆ ಪ್ರಶ್ನಿಸುವಂತಾಗಿದೆ.











Click it and Unblock the Notifications