ಕುಂದಾಪುರದಲ್ಲಿ ಎರಡು ಕೋಮಿನ ಮಧ್ಯೆ ಘರ್ಷಣೆ

ಕೋಡಿಯಲ್ಲಿ ಆರಂಭಗೊಂಡ ಭಜರಂಗದಳದ ಬೈಕ್ ಮೆರವಣಿಗೆಯಲ್ಲಿ ಕಾರ್ಯಕರ್ತರು ಉದ್ರೇಕಕಾರಿ ಘೋಷಣೆಗಳನ್ನು ಕೂಗುತ್ತಿದ್ದರೆನ್ನಲಾಗಿದೆ. ಈ ವಿಚಾರದಲ್ಲಿ ಕೋಡಿಯಲ್ಲಿ ಎರಡು ಸಮುದಾಯಗಳ ಮಧ್ಯೆ ಮಾತಿನ ಚಕಮಕಿ ನಡೆದು ಘರ್ಷಣೆ ಉಂಟಾಯಿತು.
ಸುಮಾರು ಐದಾರು ತಂಡಗಳಾಗಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಏಕ ಕಾಲದಲ್ಲಿ ಶಾಸ್ತ್ರೀ ಸರ್ಕಲ್ ಹಾಗೂ ಕಾಲೇಜು ರಸ್ತೆಯ ಸುತ್ತಮುತ್ತಲಿರುವ ಒಟ್ಟು 12 ಅಂಗಡಿಗಳು ಹಾಗೂ ಎರಡು ಮನೆಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದಾರೆ. ಇದರಿಂದ ಇಡೀ ಪರಿಸರ ದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು. ಕುಂದಾಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಎಸ್ಪಿ ಪವಾರ್ ಭೇಟಿ : ಗಲಭೆ ಸಂಭವಿಸಿದ ಕೋಡಿ, ಕುಂದಾಪುರ, ಗಂಗೊಳ್ಳಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಪ್ರವೀಣ್ ಮಧುಕರ್ ಪವಾರ್ ಭೇಎಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೋಡಿಯಲ್ಲಿ ಗುಂಪು ಘರ್ಷಣೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಕೆಲವು ಅಂಗಡಿಗಳ ಮೇಲೆ ಕಲ್ಲು ತೂರಾಟ ಮಾಡಿ ದಾಳಿ ನಡೆಸಲಾಗಿದೆ. ಇದರಿಂದ ಕೆಲವರಿಗೆ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ ಕುಂದಾಪುರದಲ್ಲಿ ಒಟ್ಟು 11 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಪವಾರ್ ತಿಳಿಸಿದ್ದಾರೆ.












Click it and Unblock the Notifications