• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

2011ರ ಜನಗಣತಿ : ಮಂಗಳಮುಖಿಯರಿಗೆ ಪ್ರತ್ಯೇಕ ವರ್ಗ

By Mrutyunjaya Kalmat
|

ನವದೆಹಲಿ, ಡಿ. 14 : 2011ರ ಜನಗಣತಿಯಲ್ಲಿ ಮಂಗಳಮುಖಿಯರನ್ನು ಮೂರನೇ ವರ್ಗದಲ್ಲಿ ಸೇರಿಸುವಂತೆ ತಾಂತ್ರಿಕ ಸಲಹಾ ಸಮಿತಿ ಮಾಡಿದ್ದ ಶಿಫಾರಸ್ಸನ್ನು ಕೇಂದ್ರ ಸರಕಾರ ಅಂಗೀಕರಿಸಿದೆ. ಮಂಗಳಮುಖಿಯರನ್ನು ಮಹಿಳೆ, ಪುರುಷರಲ್ಲದ ಮೂರನೇ ವರ್ಗಕ್ಕೆ ಸೇರಿಸಲು ಸಮಿತಿ ಮಾಡಿದ್ದ ಶಿಫಾರಸ್ಸನ್ನು ಕೇಂದ್ರ ಗೃಹ ಸಚಿವಾಲಯ ಅಸ್ತು ಎಂದಿದೆ.

2011ರ ಜನಗಣತಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಕೋಡ್ ನೀಡುವಂತೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿತ್ತು. ಅದರಂತೆ ಪುರುಷರಿಗೆ 1 ಮತ್ತು ಮಹಿಳೆಯರಿಗೆ 2 ಮತ್ತು ಲೈಂಗಿಕ ಅಲ್ಪಸಂಖ್ಯಾತರಿಗೆ 3 ಎಂಬ ಸಂಖ್ಯೆಯನ್ನು ನೀಡಲಾಗುವುದು ಎಂದು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಹೇಳಿದೆ.

ಎನ್‌ಜಿಒವೊಂದು ಲೈಂಗಿಕ ಅಲ್ಪಸಂಖ್ಯಾತರನ್ನು ಪ್ರತ್ಯೇಕ ವರ್ಗಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಪ್ರಧಾನಿ ಮನಮೋಹನ್ ಸಿಂಗ್, ರಾಷ್ಟ್ರಾಧ್ಯಕ್ಷೆ ಪ್ರತಿಭಾ ಪಾಟೀಲ್, ಗೃಹ ಸಚಿವಾಲಯ ಮತ್ತು ರಿಜಿಸ್ಟ್ರಾರ್ ಜನರಲ್ ಕಚೇರಿಗೆ ಅರ್ಜಿಯನ್ನು ಸಲ್ಲಿಸಿತ್ತು. ಜೊತೆಗೆ ಸುಪ್ರೀಂ ಕೋರ್ಟ್‌ಗೆ ಒಂದು ಅರ್ಜಿಯನ್ನು ಸಲ್ಲಿಸಿತ್ತು. ಮಂಗಳಮುಖಿಯರ ಮನವಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ತಾಂತ್ರಿಕ ಸಮಿತಿಯೊಂದನ್ನು ರಚಿಸಿತ್ತು.

ಬಿದರಿ ಎಚ್ಚರಿಕೆ : ಏ ಮಾಮಾ ರೊಕ್ಕ ಕೊಡೋ ಎನ್ನುವ ಮಾತಗಳು ಇನ್ನು ಮುಂದೆ ನಗರದ ಯಾವುದೇ ಸಿಗ್ನಲ್ ಬಳಿ ಬಳಿ ನಮ್ಮ ಕಿವಿಗೆ ಬೀಳುವುದು ಕಡಿಮೆಯಾಗಬಹುದು. ಭಿಕ್ಷೆ ಬೇಡುವ ನೆಪದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ಮಂಗಳಮುಖಿಯರ ಹಾವಳಿಗೆ ಕಡಿವಾಣ ಹಾಕಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಹೇಳಿದ್ದಾರೆ.

ಮಂಗಳಮುಖಿಯರು ಇತ್ತೀಚೆಗೆ ದರೋಡೆ ಹಾಗೂ ಇನ್ನಿತರ ಅಪರಾಧ ಕೃತ್ಯ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮಕ್ಕೆ ಸಿದ್ಧತೆ ನಡೆಸಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Eunuchs, who for years have been an object of ridicule for many, finally got an identity thanks to Census 2011 for having included them in population count. Though there has been no categorical mention of eunuchs in the census form, the fact that they were considered as ‘third option’ under sex determination column has brought cheers for the members of the ‘third gender’.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more