ಪೆಟ್ರೋಲ್ ದರ ಲೀಟರ್ ಗೆ 2.96 ರು.ಏರಿಕೆ
ನವದೆಹಲಿ,ಡಿ.15
: ವಾಹನ ಸವಾರರಿಗೆ ಕೇಂದ್ರ ಸರಕಾರ ಮತ್ತೊಮ್ಮೆ ಬರೆ ಏಳೆದಿದೆ. ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದರಿಂದ ಪೆಟ್ರೋಲ್ ದರವನ್ನು ಲೀಟರ್ ಗೆ 2.96 ರುಪಾಯಿ ಏರಿಕೆ ಮಾಡಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಗೆ ಬಂದಿದೆ. id="toptextpromo">ಮುಖ್ಯವಾಗಿ
ಭಾರತ್ ಪೆಟ್ರೋಲಿಯಂ ಸಂಸ್ಥೆಯು ನೂತನ ಪೆಟ್ರೋಲ್ ದರವನ್ನು ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಗೆ ತಂದಿದೆ. ಇನ್ನೆರಡು ಸಾರ್ವಜನಿಕ ರಂಗದ ಸಂಸ್ಥೆಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಓಎಲ್) ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್), ಗುರುವಾರದಿಂದ ಪೆಟ್ರೋಲ್ ದರವನ್ನು ಏರಿಕೆ ಮಾಡಲಿವೆ ಎಂದು ಹೇಳಲಾಗಿದೆ. id='are-slot-1' class='oiad oi-axt oiadv'> id='top-searched-articles'>ಅಂತಾರಾಷ್ಟ್ರೀಯ
ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ತೈಲ ಸಚಿವಾಲಯವು ಈ ಮೂರು ತೈಲ ಸಂಸ್ಥೆಗಳಿಗೆ ಪೆಟ್ರೋಲ್ ದರ ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಕಳೆದ ನವೆಂಬರ್ ನಲ್ಲಿ ಸಂಸತ್ ನ ಚಳಿಗಾಲ ಆರಂಭಕ್ಕೆ ಕೆಲವೇ ದಿನಗಳ ಮೊದಲು ಪೆಟ್ರೋಲ್ ದರವನ್ನು ಪ್ರತಿ ಲೀಟರ್‌ಗೆ 0.32 ಪೈಸೆಯಷ್ಟು ಏರಿಕೆ ಮಾಡಲಾಗಿತ್ತು.











Click it and Unblock the Notifications