ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಟ್ರೋಲ್ ದರ ಲೀಟರ್ ಗೆ 2.96 ರು.ಏರಿಕೆ

By Mrutyunjaya Kalmat
|
Google Oneindia Kannada News

Petrol pump
ನವದೆಹಲಿ,ಡಿ.15 : ವಾಹನ ಸವಾರರಿಗೆ ಕೇಂದ್ರ ಸರಕಾರ ಮತ್ತೊಮ್ಮೆ ಬರೆ ಏಳೆದಿದೆ. ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದರಿಂದ ಪೆಟ್ರೋಲ್ ದರವನ್ನು ಲೀಟರ್‌ ಗೆ 2.96 ರುಪಾಯಿ ಏರಿಕೆ ಮಾಡಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಗೆ ಬಂದಿದೆ.

ಮುಖ್ಯವಾಗಿ ಭಾರತ್ ಪೆಟ್ರೋಲಿಯಂ ಸಂಸ್ಥೆಯು ನೂತನ ಪೆಟ್ರೋಲ್ ದರವನ್ನು ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಗೆ ತಂದಿದೆ. ಇನ್ನೆರಡು ಸಾರ್ವಜನಿಕ ರಂಗದ ಸಂಸ್ಥೆಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಓಎಲ್) ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್), ಗುರುವಾರದಿಂದ ಪೆಟ್ರೋಲ್ ದರವನ್ನು ಏರಿಕೆ ಮಾಡಲಿವೆ ಎಂದು ಹೇಳಲಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ತೈಲ ಸಚಿವಾಲಯವು ಈ ಮೂರು ತೈಲ ಸಂಸ್ಥೆಗಳಿಗೆ ಪೆಟ್ರೋಲ್ ದರ ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಕಳೆದ ನವೆಂಬರ್ ನಲ್ಲಿ ಸಂಸತ್‌ ನ ಚಳಿಗಾಲ ಆರಂಭಕ್ಕೆ ಕೆಲವೇ ದಿನಗಳ ಮೊದಲು ಪೆಟ್ರೋಲ್ ದರವನ್ನು ಪ್ರತಿ ಲೀಟರ್‌ಗೆ 0.32 ಪೈಸೆಯಷ್ಟು ಏರಿಕೆ ಮಾಡಲಾಗಿತ್ತು.

English summary
Brace up to pay more for your petrol. Bharat Petroleum Corporation (BPCL) has raised petrol price by Rs 2.95 per litre effective Wednesday, while Indian Oil Corporation (IOC) and Hindustan Petroleum Corporation (HPCL) will follow suit with an increase of Rs 2.96 per litre a day later. This is the highest price hike after government freed petrol prices from its control in June this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X