ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೋಪಯ್ಯ ಎಸ್ಕಾರ್ಟ್ ಜೀಪು ಅಪಘಾತ: ಎಸ್‌ಐ ಸಾವು

By * ಬಿ.ಎಂ.ಲವಕುಮಾರ್, ಮೈಸೂರು
|
Google Oneindia Kannada News

KG Bopaiah escort vehicle
ಮಡಿಕೇರಿ, ಡಿ.16: ವಿಧಾನಸಭಾಧ್ಯಕ್ಷ ಕೆಜಿ ಬೋಪಯ್ಯ ಅವರ ಎಸ್ಕಾರ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಎಸ್‌ಐ ಸಾವನ್ನಪ್ಪಿದ್ದಾರೆ. ವಾಹನ ಚಾಲಕ ಸೇರಿ ಮೂವರು ಸಿಬ್ಬಂದಿಗಳು ಗಂಭೀರ ಗಾಯಗೊಂಡಿರುವ ಘಟನೆ ಕುಶಾಲನಗರ ಸಮೀಪದ ಬಸವನಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಘಟನೆಯಲ್ಲಿ ಕೊಡಗಿನ ಪಾರಾಣೆ ನಿವಾಸಿ ಸಬ್ ಇನ್ಸ್‌ಫೆಕ್ಟರ್ ಮೊಣ್ಣಪ್ಪ ಎಂಬುವರು ಸಾವನ್ನಪ್ಪಿದ್ದು, ಚಾಲಕ ಯೋಗೇಶ್, ಪೇದೆಗಳಾದ ವಸಂತ, ಸೋಮಣ್ಣ ಎಂಬುವರು ಗಂಭೀರ ಗಾಯಗೊಂಡಿದ್ದಾರೆ.

ಘಟನೆಯ ವಿವರ: ಬುಧವಾರ ಸಂಜೆ ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ, ಪತ್ನಿ ಕುಂತಿಬೋಪಯ್ಯ ಹಾಗೂ ಶಾಸಕ ಅಪ್ಪಚ್ಚುರಂಜನ್, ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಎನ್.ರಾಜಾರಾವ್ ಅವರುಗಳು ಕಾರಿನಲ್ಲಿ ಮಡಿಕೇರಿಯಿಂದ ಬೆಂಗಳೂರಿನತ್ತ ತೆರಳುತ್ತಿದ್ದರು. ಇವರ ಕಾರಿನ ಮುಂದೆ ಎಸ್ಕಾರ್ಟ್ ಕಾರು ತೆರಳುತ್ತಿತ್ತು.

ಸಂಜೆ 6.45ರ ವೇಳೆಗೆ ಕುಶಾಲನಗರಕ್ಕೆ ಸಮೀಪವಿರುವ ಬಸವನಹಳ್ಳಿ ಬಳಿ ಎದುರಿನಿಂದ ಬಂದ ಬೈಕಿಗೆ ತೆರಳಲು ಅವಕಾಶ ಮಾಡಿಕೊಡಲು ಚಾಲಕ ಯೋಗೇಶ್ ಮುಂದಾದಾಗ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಟಿಂಬರ್ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದ ಎಸ್‌ಐ ಮೊಣ್ಣಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರಿಗೆ ಕುಶಾಲನಗರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಡಿಕೇರಿಗೆ ಕರೆದೊಯ್ಯಲಾಯಿತಾದರೂ ಅವರು ಮಡಿಕೇರಿಗೆ ತಲುಪುವ ವೇಳೆಗೆ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ.

ಇನ್ನು ಕಾರಿನಲ್ಲಿದ್ದ ಚಾಲಕ ಯೋಗೇಶ್, ಪೇದೆಗಳಾದ ವಸಂತ, ಸೋಮಣ್ಣ ಅವರಿಗೂ ಗಂಭೀರ ಗಾಯಗಳಾಗಿದ್ದು, ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಮಂಜುನಾಥ್ ಅಣ್ಣಿಗೇರಿ, ಡಿವೈಎಸ್ಪಿ ಜಯಪ್ರಕಾಶ್ ಅಕ್ಕರಕಿ, ಎಸ್‌ಐ ಚನ್ನೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಶಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Karnataka Speker KG Bopaiah"s Escort car SI Monappa from Kodagu killed in an accident(Escort jeep collided with lorry) last evening(Dec.15). The incidence took place in Basavanahalli, Kushalanagar police station limit. Three policemen also badly injured in the accident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X