ಗಣಿ ಹಗರಣ : ಸರಕಾರಕ್ಕೆ ಪತ್ರ ಬರೆದ ರಾಜ್ಯಪಾಲರು

ರೆಡ್ಡಿ ಸಹೋದರದರಿಂದ ಬಳ್ಳಾರಿಯಲ್ಲಿ ಕಾನೂನು ಉಲ್ಲಂಘನೆಯಾಗುತ್ತಿದ್ದು. ಸಚಿವರಾದ ಜರ್ನಾದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಸರಕಾರಕ್ಕೆ ತೆರಿಗೆ ಹಣ ವಂಚಿಸಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸಚಿವರನ್ನಾಗಿ ಮುಂದುವರಿಸುವ ಔಚಿತ್ಯವನ್ನು ರಾಜ್ಯಪಾಲರು ಪತ್ರದಲ್ಲಿ ಪ್ರಶ್ನಿಸಿದ್ದಾರೆ.
ಭೂ ಹಗರಣದಿಂದ ಸಾಕಾಗಿ ಹೋಗಿರುವ ಯಡಿಯೂರಪ್ಪ ಅವರಿಗೆ ರಾಜ್ಯಪಾಲರ ಪತ್ರ ಮತ್ತಷ್ಟು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳ ಕಾವೇರುತ್ತಿರುವ ಮಧ್ಯೆ ರಾಜ್ಯಪಾಲರು ಮತ್ತೆ ಸರಕಾರಕ್ಕೆ ಪತ್ರದ ಮೂಲಕ ಚಾಟಿ ಬೀಸಿರುವುದು ಬಹಳಷ್ಟು ಕುತೂಹಲವನ್ನು ಮೂಡಿಸಿದೆ.
ಮುಖ್ಯಮಂತ್ರಿ ಯಡಿಯೂರಪ್ಪನವರ ಸ್ವಜನಪಕ್ಷಪಾತ, ಅಧಿಕಾರ ದುರುಪಯೋಗ ಹಾಗೂ ಅವರು ಹಾಗೂ ಅವರ ಕುಟುಂಬ ಸದಸ್ಯರು, ಸಂಪುಟದ ಸದಸ್ಯರು ನಡೆಸಿದ್ದಾರೆನ್ನಲಾದ ಭೂ ಹಗರಣಗಳ ವಿವರಣೆ ಕೇಳಿ ರಾಜ್ಯಪಾಲರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಕಾಂಗ್ರೆಸ್ ರಾಜ್ಯಪಾಲರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅವರಿಂದ ವಿವರಣೆ ಕೇಳಿ ಈ ಪತ್ರಗಳನ್ನು ಬರೆಯಲಾಗಿದೆ.
ರೆಡ್ಡಿಗಳ ವಿರುದ್ಧ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರಿಗೆ ದೂರು ನೀಡಿದ್ದು, ಬಳ್ಳಾರಿಯಲ್ಲಿ ನಡೆಯುತ್ತಿರುವ ಕಾನೂನು ಉಲ್ಲಂಘನೆಯನ್ನು ತಡೆಗಟ್ಟುವಂತೆ ಮನವಿ ಮಾಡಿದ್ದರು.












Click it and Unblock the Notifications