ಜೆ ಪಿ ನಗರದಲ್ಲಿ ಹಾಡುಹಗಲೇ ಬಿಪಿಒ ಉದ್ಯೋಗಿ ಕೊಲೆ

ಶುಕ್ರವಾರ (ಡಿ.17)ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಕೊಲೆ ಬೆಳಕಿಗೆ ಬಂದಿದ್ದು ಮಾತ್ರ ಸಂಜೆ 4.30ರ ಸಮಯದಲ್ಲಿ. ಸುರೇಖಾ ಅವರ ಪತಿ ಆನಂದ್ ನಾರಾಯಣ್ ಮಿಶ್ರಾ ಅಸ್ಸಾಂನ ಒಡಿಶಾದಲ್ಲಿ ನೆಲೆಸಿದ್ದಾರೆ. ಸುರೇಖಾ ಇತ್ತೀಚೆಗಷ್ಟೆ ಡೆಲ್ ಕಂಪನಿಯಲ್ಲಿ ಉದ್ಯೋಗ ಪಡೆದಿದ್ದರು.
ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದ ಈ ದಂಪತಿಗಳಿಗೆ ಮಕ್ಕಳಿರಲಿಲ್ಲ. ಈ ಹಿಂದೆ ಮೂರು ವರ್ಷಗಳಿಂದ ಲಕ್ಷ್ಮಿಲೇಔಟ್‌ನ ಉಮಾ ಸಂಜೀವಿನಿ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಆನಂದ್ ಮತ್ತು ಸುರೇಖಾ ದಂಪತಿಗಳು ವಾಸವಾಗಿದ್ದರು. ಜಯನಗರದಲ್ಲಿ ಜಿಮ್ ಸೆಂಟರ್ ಒಂದನ್ನು ಆನಂದ್ ನಡೆಸುತ್ತಿದ್ದರು.
ಮಾರ್ಚ್ ತಿಂಗಳಲ್ಲಿ ಆನಂದ್ ಪತ್ನಿ ಸಮೇತ ಒಡಿಶಾಗೆ ಹೋಗಿ ನೆಲಸಿದ್ದರು. ಬಳಿಕ ಅವರು ಬೆಂಗಳೂರಿಗೆ ಹಿಂತಿರುಗಿ ನವೆಂಬರ್ ತಿಂಗಳಿಂದ ರಮಣಬಾಹು ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯನ್ನು ಬಿಟ್ಟುಹೋಗಿದ್ದರು ಎಂದು ಪೊಲೀರು ತಿಳಿಸಿದ್ದಾರೆ.
ಪರಿಚಿತ ವ್ಯಕ್ತಿಯೇ ಹಂತಕ!: ಉಮಾ ಸಂಜೀವಿನಿ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ಗೆ ಬೆಳಿಗ್ಗೆ 10 ಗಂಟೆಗೆ ಅಪರಿಚಿತ ವ್ಯಕ್ತಿಯೊಬ್ಬ ಆನಂದ್ ನಿವಾಸದ ಬಗ್ಗೆ ವಿಚಾರಿಸಿದ್ದ. ಸೆಕ್ಯುರಿಟಿ ಗಾರ್ಡ್ ರಮಣಬಾಹು ಅಪಾರ್ಟ್‌ಮೆಂಟ್‌ನಲ್ಲಿ ಆನಂದ್ ಪತ್ನಿ ವಾಸವಾಗಿರುವುದಾಗಿ ಹೇಳಿದ್ದ. ಆ ವ್ಯಕ್ತಿಯೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಬೆಳಗ್ಗೆ 11ಗಂಟೆ ಸುಮಾರಿನಲ್ಲಿ ಆನಂದ್ ತಮ್ಮ ಪತ್ನಿ ಸುರೇಖಾ ಮೊಬೈಲ್‌ಗೆ ಫೋನು ಮಾಡಿದ್ದಾರೆ. ಆಕೆ ಕರೆ ಸ್ವೀಕರಿಸದ ಕಾರಣ ಅನುಮಾನಗೊಂಡ ಅವರು ಅಪಾರ್ಟ್‌ಮೆಂಟ್ ಮಾಲೀಕರಿಗೆ ಕರೆ ಮಾಡಿ ತಿಳಿಸಿದ್ದಾರೆ. ಮಾಲೀಕರು ಫ್ಲಾಟ್ ಬಳಿ ಹೋದಾಗ ಬಾಗಿಲಿಗೆ ಚಿಲಕ ಹಾಕಿತ್ತು. ಅವರು ಪೊಲೀಸರಿಗೆ ವಿಷಯ ತಿಳಿಸಿದ ಬಳಿಕ ಈ ಕೊಲೆ ಪ್ರಕರಣ ಬಯಲಾಗಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications