ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋನಿಯಾ ಟೀಕೆಗೆ ಯಡಿಯೂರಪ್ಪ ಗರಂ

By Mrutyunjaya Kalmat
|
Google Oneindia Kannada News

BS Yeddyurappa
ಗುಲ್ಬರ್ಗಾ,ಡಿ. 20 : ಪದೆ ಪದೇ ರಾಜ್ಯ ಸರಕಾರದ ವಿರುದ್ದ ಟೀಕೆ ಮಾಡುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಕಾಂಗ್ರೆಸ್ ಬಣ್ಣ ಏನೆಂಬುದು ಇಡೀ ದೇಶಕ್ಕೆ ಗೊತ್ತಿದೆ. ಯಾವ ಯಾವ ನಾಯಕರು ಏನೆಲ್ಲಾ ಭ್ರಷ್ಟಾಚಾರ ಮಾಡಿದ್ದಾರೆ ಎಂಬುದು ದಾಖಲಾಗಿದೆ ಎಂದು ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸೋನಿಯಾ ಗಾಂಧಿ ಅವರು ಇತ್ತೀಚೆಗೆ ರಾಜ್ಯ ಸರಕಾರದ ಮೇಲೆ ದಾಳಿ ಆರಂಭಿಸಿದ್ದಾರೆ. ಕಾಂಗ್ರೆಸ್ ಸಂಸ್ಕೃತಿ ಏನೆಂಬುದು ಮೊದಲು ಅರಿತು ಮಾತನಾಡಲಿ. ಬಿಜೆಪಿ ಸರಕಾರದ ವಿರುದ್ಧ ಮಾತನಾಡುವ ನೈತಿಕತೆಯನ್ನು ಈ ಕಾಂಗ್ರೆಸ್ ನಾಯಕರು ಉಳಿಸಿಕೊಂಡಿದ್ದಾರೆಯೇ ಎಂದು ಯಡಿಯೂರಪ್ಪ ಪ್ರಶ್ನಿಸಿದರು.

ನವದೆಹಲಿಯಲ್ಲಿ ಆರಂಭಗೊಂಡ ಎಐಸಿಸಿಯ 83ನೇ ಮಹಾಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ಸೋನಿಯಾ, ಭ್ರಷ್ಟಾಚಾರ ಹಾಗೂ ದುರ್ನಡತೆಗೆ ಪಕ್ಷದಲ್ಲಿ ಎಳ್ಳಷ್ಟೂ ಸ್ಥಾನವಿಲ್ಲವೆಂದು ಘೋಷಿಸಿದ್ದರು. ಈ ಘೋರ ಪಿಡುಗನ್ನು ಪಕ್ಷ ಹಾಗೂ ಸರಕಾರವು ಕಿತ್ತೊಗೆಯಬೇಕೆಂದು ಕರೆ ನೀಡಿದ್ದರು. 2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ಪ್ರಧಾನಿ ಮನಮೋಹನ್‌ಸಿಂಗ್‌ ರ ತೇಜೋವಧೆ ನಡೆಸುತ್ತಿರುವ ಬಿಜೆಪಿಯ ಮೇಲೂ ಅವರು ತೀವ್ರ ವಾಗ್ದಾಳಿ ನಡೆಸಿದ್ದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭೂಹಗರಣದಲ್ಲಿ ಭಾಗಿಯಾಗಿದ್ದರೂ ಅವರ ವಿರುದ್ಧ ಬಿಜೆಪಿ ಯಾವ ಕ್ರಮಕೈಗೊಂಡಿದೆ. ಭ್ರಷ್ಟಾಚಾರದ ವಿರುದ್ಧ ಕ್ರಮಕೈಗೊಳ್ಳದ ಬಿಜೆಪಿ 2 ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಸತ್ ಕಲಾಪಗಳನ್ನು ಸ್ಥಗಿತಗೊಳಿಸುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಭ್ರಷ್ಟಾಚಾರ ಹಾಗೂ ಕೋಮುವಾದದ ವಿರುದ್ಧ ವಾಗ್ದಾಳಿ ನಡೆಸಿದ್ದ ಸೋನಿಯಾಗಾಂಧಿ, ಬಹುಸಂಖ್ಯಾತ ಹಾಗೂ ಅಲ್ಪಸಂಖ್ಯಾತ ಕೋಮುವಾದಗಳೆರಡೂ ಅಪಾಯಕಾರಿಯಾಗಿದ್ದು, ಅವನ್ನು ಪರಾಭವಗೊಳಿಸಬೇಕಾಗಿದೆಯೆಂದು ಪ್ರತಿಪಾದಿಸಿದ್ದಾರೆ.(ಯಡಿಯೂರಪ್ಪ)

English summary
At two meetings, she had labelled the Karnataka government corrupt Karnataka Chief Minister B.S. Yeddyurappa has said that the charges made by Congress president Sonia Gandhi against his government are baseless and made with an intention to tarnish the image of the government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X