ಯಡಿಯೂರಪ್ಪ ಡಕಾಯಿತ : ಬೆಂಕಿ ಮಹದೇವು

ಯಡಿಯೂರಪ್ಪ ಅವರ ಕಾರ್ಯ ವೈಖರಿಯಿಂದ ಬೇಸತ್ತು ಬಿಜೆಪಿ ತೊರೆದಿದ್ದ ಎಂ ಮಹದೇವ್ ಜಾತ್ಯತೀತ ಜನತಾದಳ ಅಧಿಕೃತ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಜೆಡಿಎಸ್ ಬಾವುಟ ನೀಡುವ ಮೂಲಕ ಮಹದೇವ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ನಂತರ ಮಾತನಾಡಿದ ಮಹದೇವ್ ಭಾಷಣದುದ್ದಕ್ಕೂ ಯಡಿಯೂರಪ್ಪ ಅವರ ವಿರುದ್ದ ಟೀಕಾ ಪ್ರಹಾರಗಳನ್ನೆ ನಡೆಸಿದರು. ಜಾತಿಯ ಹೆಸರಿನಲ್ಲಿ ವೀರಶೈವರ ಬೆಂಬಲ ಪಡೆದು ಅಧಿಕಾರಕ್ಕೆ ಬಂದ ಯಡಿಯೂರಪ್ಪ ಬಸವಣ್ಣನವರ ತತ್ವ ಮತ್ತು ಆದರ್ಶಗಳನ್ನು ಗಾಳಿಗೆ ತೂರಿದ್ದು, ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ. ಆದ್ದರಿಂದ ವೀರಶೈವರು ಯಡಿಯೂರಪ್ಪಅವರನ್ನು ಬೆಂಬಲಿಸಬಾರದು ಎಂದು ಮಹದೇವ್ ಮನವಿ ಮಾಡಿಕೊಂಡರು.
ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ಸರಕಾರದ ವಿರುದ್ಧ ಕುಮಾರಸ್ವಾಮಿ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲವಾಗಿ ನಿಲ್ಲಲು ಜೆಡಿಎಸ್ ಸೇರ್ಪಡೆಯಾಗುತ್ತಿರುವುದಾಗಿ ಸ್ಪಷ್ಟಪಡಿಸಿದರು.












Click it and Unblock the Notifications