ಆರ್ ಟಿಐ ಕೇಸ್ ಎಸ್ಸೆಮ್ಮೆಸ್ ಮೂಲಕ ಮಾಹಿತಿ

ನಗರದಲ್ಲಿನ ಕರ್ನಾಟಕ ಮಾಹಿತಿ ಆಯೋಗದ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ವಿಡಿಯೋ ಕಾನ್ಪರೆನ್ಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಆಯಾ ಇಲಾಖೆಯಲ್ಲಿರುವ ಮಾಹಿತಿ ಅಧಿಕಾರಿಗಳು ಅರ್ಜಿದಾರರು ಕೋರಿರುವ ಮಾಹಿತಿಗಳನ್ನು ನಿಗದಿತ ಅವಧಿಯೊಳಗೆ ನೀಡಬೇಕು ಎಂದರು. ಮಾಹಿತಿ ಅಧಿಕಾರಿಗಳಿಗೆ ಈ ಸಂಬಂಧ ಸೂಕ್ತವಾದ ಮಾರ್ಗದರ್ಶನ ನೀಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಎಸ್. ವಿ. ರಂಗನಾಥ್ ಅವರು ತಿಳಿಸಿದರು.
ಎಸ್ಎಂಎಸ್ ಮೂಲಕ ಮಾಹಿತಿ : ಸಾರ್ವಜನಿಕರು ಮಾಹಿತಿ ಹಕ್ಕು ಅಧಿನಿಯಮ ಕೋರಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಜನವರಿ ಮೊದಲವಾರದಿಂದ ಎಸ್. ಎಂ.ಎಸ್. ಮೂಲಕ ಪ್ರಾಥಮಿಕ ಮಾಹಿತಿಗಳನ್ನು ನೀಡಲಾಗುವುದು ಎಂದು ರಾಜ್ಯ ಮಾಹಿತಿ ಆಯುಕ್ತ ಹೆಚ್. ಎನ್. ಕೃಷ್ಣ ಅವರು ತಿಳಿಸಿ ಪ್ರಕರಣದ ದಾಖಲಾತಿ ಮಾಹಿತಿ, ಪ್ರಕರಣ ನಡೆಯುವ ದಿನಾಂಕ ಇತರೆ ಮಾಹಿತಿಗಳನ್ನು ನೀಡಲಾಗುವುದು ಎಂದರು.
ರಾಜ್ಯ ಮಾಹಿತಿ ಆಯೋಗದಲ್ಲಿ ಈಗಾಗಲೇ 15 ಸಾವಿರ ಪ್ರಕರಣಗಳು ದಾಖಲಾಗಿದ್ದು ಪ್ರತಿದಿನಕ್ಕೆ 12 ಹೊಸ ಪ್ರಕರಣಗಳು ದಾಖಲಾಗುತ್ತಿದೆ. ಗ್ರಾಮೀಣ ಭಾಗದಿಂದ ಹೆಚ್ಚಿನ ಅರ್ಜಿಗಳು ಬಂದಿರುವುದು ಗಮನಾರ್ಹ ಬೆಳವಣಿಗೆ ಎಂದ ಅವರು ಇನ್ನು ಮುಂದೆ ಪ್ರತಿ ಶನಿವಾರ ವಿಡಿಯೋ ಕಾನ್ಪರೆನ್ಸ್ ನಡೆಸಲು ಚಿಂತಿಸಲಾಗಿದೆ ಎಂದರು.
ಶಿವಮೊಗ್ಗ, ಗುಲ್ಬರ್ಗಾ, ಬೆಳಗಾಂ, ಕೊಪ್ಪಳ, ಕಾರವಾರ ಜಿಲ್ಲೆಗಳ ಮಾಹಿತಿ ಆಯುಕ್ತರೊಡನೆ ಇವರು ವಿಡಿಯೋ ಕಾನ್ಪರೆನ್ಸ್ ನಡೆಸಲಾಯಿತು. ಮಾಜಿ ರಾಜ್ಯ ಮಾಹಿತಿ ಆಯುಕ್ತರುಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. [ಆರ್ ಟಿಐ]












Click it and Unblock the Notifications