ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರ ರಾಜಕಾರಣದತ್ತ ಯಡಿಯೂರಪ್ಪ ಚಿತ್ತ

By Mrutyunjaya Kalmat
|
Google Oneindia Kannada News

Yeddyurappa
ಶಿವಮೊಗ್ಗ, ಡಿ. 23 : ರಾಷ್ಟ್ರ ರಾಜಕಾರಣದತ್ತ ಮುಖ್ಯಮಂತ್ರಿ ಯಡಿಯೂರಪ್ಪ ಒಲವು ವ್ಯಕ್ತಪಡಿಸಿದ್ದಾರೆ. ಮುಂದಿನ ಎರಡೂವರೆ ವರ್ಷಗಳ ಅಧಿಕಾರಾವಧಿ ಮುಕ್ತಾಯವಾದ ನಂತರ ರಾಷ್ಟ್ರ ರಾಜಕೀಯಕ್ಕೆ ಪ್ರವೇಶ ಪಡೆಯುವ ಆಲೋಚನೆ ನಡೆಸಿದ್ದಾರೆ. ಈ ಅವಧಿಯಲ್ಲಿ ನಾನೇ ಮುಖ್ಯಮಂತ್ರಿಯಾಗಿ ಪೂರ್ಣಗೊಳಿಸುವ ವಿಶ್ವಾಸದಿಂದ ಹೇಳಿದ್ದಾರೆ.

ಶಿಕಾರಿಪುರದ ಮಂಗಳಭವನದಲ್ಲಿ ಮಾತನಾಡಿದ ಅವರು, ಸಿಎಂ ಅಧಿಕಾರಾವಧಿ ಪೂರ್ಣಗೊಂಡ ನಂತರ ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತೇನೆ. ರಾಜ್ಯಸಭೆ ಸದಸ್ಯನಾಗುವ ಆಸೆ ಇದೆ. ಈಗಾಗಲೇ ಈ ಸಂಬಂಧ ಪಕ್ಷದ ರಾಷ್ಟ್ರ ಹಾಗೂ ರಾಜ್ಯ ನಾಯಕರೊಂದಿಗೆ ಚರ್ಚೆ ಮಾಡಿದ್ದೇನೆ. ಅವರು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನ ತುಂಬಲು ರಾಜ್ಯದಲ್ಲಿ ಅನೇಕ ಮಂದಿ ಸಮರ್ಥರಿದ್ದಾರೆ. ಈ ಪೈಕಿ ಯಾರು ಭವಿಷ್ಯದ ನಾಯಕ ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಹಲವು ದಶಕಗಳ ಅವಧಿಯಲ್ಲಿ ಪಕ್ಷ ಬಹಳಷ್ಟು ಮಂದಿ ನಾಯಕರನ್ನು ತಯಾರು ಮಾಡಿದೆ. ಈ ಹಿನ್ನೆಲೆಯಲ್ಲಿ ಪಕ್ಷಕ್ಕೆ ನಾಯಕತ್ವದ ಕೊರತೆ ಇಲ್ಲ ಎಂದು ಅವರು ವಿವರಿಸಿದರು.

ಜಿ.ಪಂ.-ತಾ.ಪಂ. ಚುನಾವಣೆ ಮುಕ್ತಾಯವಾದ ನಂತರ ರಾಜ್ಯಾದ್ಯಂತ ಪ್ರವಾಸ ನಡೆಸಲಾಗುವುದು. ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟನೆ ಮಾಡಲಾಗುವುದು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲಾಗುವುದು ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

English summary
In a surprise announcement, Karnataka chief minister BS Yeddyurappa today made known his intention to take active part in national politics and serve as a Rajya Sabha member after completing his term.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X