• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಂಡನಲ್ಲ ನನ್ನ ಗಂಡ : ತೇಜಸ್ವಿನಿ ಅನಂತ್ ಕುಮಾರ್

By Prasad
|

ಬೆಂಗಳೂರು, ಡಿ. 27 : "2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಕಾರ್ಪೊರೇಟ್ ಮಧ್ಯವರ್ತಿ ನೀರಾ ರಾಡಿಯಾ ಮತ್ತು ನನ್ನ ಗಂಡ, ಲೋಕಸಭಾ ಸದಸ್ಯ ಅನಂತ್ ಕುಮಾರ್ ಯಾವುದೇ ನಿಕಟ ವ್ಯವಹಾರ ಹೊಂದಿರಲಿಲ್ಲ. ಕಾಂಗ್ರೆಸ್ ಮಾಡಿರುವ ಆರೋಪಗಳೆಲ್ಲ ಆಧಾರರಹಿತ ಮತ್ತು ರಾಜಕೀಯ ಪ್ರೇರಿತವಾಗಿವೆ" ಎಂದು ಅನಂತ್ ಕುಮಾರ್ ಅವರ ಹೆಂಡತಿ ತೇಜಸ್ವಿನಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಬಿಐನಿಂದ ತನಿಖೆಯಾಗಿ ಆರೋಪಗಳಿಂದ ಮುಕ್ತರಾಗುವವರೆಗೆ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ರಾಜ್ಯದ ಕಾಂಗ್ರೆಸ್ ನಾಯಕರೆಲ್ಲ ಆಗ್ರಹಿಸುತ್ತಿದ್ದಾರೆ. ರಾಷ್ಟ್ರಮಟ್ಟದಲ್ಲಿಯೂ ಇದರ ಬಗ್ಗೆ ಹುಯಿಲೆದ್ದಿದ್ದರೂ ಅನಂತ್ ಕುಮಾರ್ ಮೌನವಾಗಿದ್ದರೆ, ಅವರ ಹೆಂಡತಿ ತೇಜಸ್ವಿನಿ ಅನಂತ್ ಕುಮಾರ್ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಜಿನಿಯರಿಂಗ ಪದವಿ ಪಡೆದು, ಎಡಿಎ ಸಂಸ್ಥೆಯಲ್ಲಿ ವಿಜ್ಞಾನಿಯಾಗಿದ್ದ ತೇಜಸ್ವಿನಿ, ಮಾಧ್ಯಮದವರೊಂದಿಗೆ ಮಾತನಾಡುತ್ತ, 2ಜಿ ತರಂಗಗುಚ್ಛ ಮತ್ತು ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ನಡೆದ ಹಗರಣಗಳಲ್ಲಿ ಭಾಗಿಯಾಗಿರುವ ಕಾಂಗ್ರೆಸ್, ದೇಶದ ದಾರಿ ತಪ್ಪಿಸಲು ಬಿಜೆಪಿ ನಾಯಕರನ್ನು ಅನವಶ್ಯಕವಾಗಿ ಗುರಿಮಾಡುತ್ತಿದ್ದಾರೆ ಎಂದು ಆರೋಪಿಸಿದರು.

2ಜಿ ತರಂಗಗುಚ್ಛ ಹಗರಣವನ್ನು ಜಂಟಿ ಸಂಸದೀಯ ಸಮಿತಿಯಿಂದ ತನಿಖೆಯಾಗಬೇಕೆಂದು ಆಗ್ರಹಿಸುತ್ತಿದ್ದವರಲ್ಲಿ ಅನಂತ್ ಅಗ್ರಗಣ್ಯರು. ಇದನ್ನು ಸಹಿಸದ ಕಾಂಗ್ರೆಸ್ ನಾಯಕು ಅನಂತ್ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇಂಥ ನಿರಾಧಾರ ಆರೋಪಗಳಿಂದ ಜನರನ್ನು ಮೂರ್ಖರನ್ನಾಗಿ ಮಾಡಲು ಕಾಂಗ್ರೆಸ್ಸಿಗೆ ಸಾಧ್ಯವಿಲ್ಲ ಎಂದು ಅವರು ಹರಿಹಾಯ್ದರು.

ಅದಮ್ಯ ಚೇತನ, ಆರೋಗ್ಯ ಚೇತನ, ಶಿಕ್ಷಕ ಚೇತನ, ಆಟ-ಪಾಠ, ರಕ್ತದಾನ್ ಮುಂತಾದ ಸಾಮಾಜಿಕ ಸೇವಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವ ತೇಜಸ್ವಿನಿಯವರು ಅನಂತ್ ಕುಮಾರ್ ಅವರ ಹಿಂದಿರುವ ಅನಂತ ಶಕ್ತಿ ಎಂದರೂ ತಪ್ಪಾಗಲಾರದು. [2ಜಿ ಹಗರಣ]

English summary
Tejaswini Ananth Kumar says there is no link between corporate lobbyist Niira Radia and her husband and all the charges levelled against him by Congress are baseless, in relation with 2G spectrum scam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X