ಮತ್ತೆ ಚುರುಕುಗೊಂಡ ತೆಲಂಗಾಣ ಹೋರಾಟ

Telangana map
ಹೈದರಾಬಾದ್, ಡಿ. 27 : ಆಂಧ್ರಪ್ರದೇಶ ರಾಜಕೀಯದಲ್ಲಿ ಉಪವಾಸ ಸತ್ಯಾಗ್ರಹಗಳ ಸರದಿ ಮುಂದುವರಿದಿದೆ. ಚಂದ್ರಬಾಬು ನಾಯ್ಡು, ಜಗನ್ಮೋಹನ್ ರೆಡ್ಡಿ ನಂತರ ಇದೀಗ ತೆಲಂಗಾಣ ಪ್ರತ್ಯೇಕ ರಾಜ್ಯಕ್ಕೆ ಸಂಬಂಧಿಸಿದಂತೆ ಕೇಂದ್ರದ ಕಾಂಗ್ರೆಸ್ ಸರಕಾರದ ವಿಳಂಬ ಧೋರಣೆ ಖಂಡಿಸಿ ಕಾಂಗ್ರೆಸ್ ಸಚಿವರು, ಸಂಸದರು ಹಾಗೂ ಶಾಸಕರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಸ್ವತಃ ಕಾಂಗ್ರೆಸ್ ಸಂಸದರು, ಶಾಸಕರು ಉಪವಾಸ ಸತ್ಯಾಗ್ರಹ ಆರಂಭಿಸಿರುವುದು ಸರಕಾರಕ್ಕೆ ನುಂಗಲಾರದ ತುತ್ತಾಗಿದೆ. ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಉಪವಾಸ ಸತ್ಯಾಗ್ರಹ ಬೇಡ ಎಂದು ಮಾಡಿಕೊಂಡಿರುವ ಮನವಿಯನ್ನು ತೆಲಂಗಾಣ ಪ್ರಾಂತ್ಯದ ಕಾಂಗ್ರೆಸ್ ಮುಖಂಡರು ತಿರಸ್ಕರಿಸಿದ್ದಾರೆ. ಜೊತೆಗೆ ತೆಲಂಗಾಣ ಪ್ರತ್ಯೇಕ ರಾಜ್ಯಕ್ಕಾಗಿ ಉಸ್ಮಾನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಅನೇಕ ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ಅವುಗಳನ್ನು ತಕ್ಷಣಕ್ಕೆ ತೆಗೆದು ಹಾಕಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.

ಕೇಂದ್ರ ಗೃಹ ಮಂತ್ರಿ ಪಿ ಚಿದಂಬರಂ ತೆಲಂಗಾಣ ರಾಜ್ಯ ರಚನೆಗೆ ಕೇಂದ್ರದಿಂದ ಯಾವುದೇ ತಕರಾರು ಇಲ್ಲ ಎಂದು ಘೋಷಣೆ ಮಾಡಿರುವುದು ತೆಲಂಗಾಣ ಪ್ರದೇಶದ ಕಾಂಗ್ರೆಸ್ ಮುಖಂಡರಿಗೆ ವರವಾಗಿ ಪರಿಣಮಿಸಿದೆ. ತೆಲಂಗಾಣ ರಾಜ್ಯ ರಚನೆಗಾಗಿ ಕೇಂದ್ರ ಶ್ರೀಕೃಷ್ಣ ಆಯೋಗವನ್ನು ರಚಿಸಿತ್ತು. ಈ ವರದಿಯನ್ನು ಜನವರಿಯಲ್ಲಿ ಆಯೋಗ ಸರಕಾರಕ್ಕೆ ಸಲ್ಲಿಸಲಿದೆ. ಹೀಗಾಗಿ ತೆಲಂಗಾಣದ ಮುಖಂಡರು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

ನೆರೆ ಸಂತ್ರಸ್ಥ ರೈತರಿಗೆ ಸೂಕ್ತ ಪರಿವಾರ ನೀಡಬೇಕೆಂದು ಆಗ್ರಹಿಸಿ ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಮತ್ತು ಕಾಂಗ್ರೆಸ್ ರೆಬೆಲ್ ನಾಯಕ ಜಗನ್ಮೋಹನ್ ರೆಡ್ಡಿ ಇತ್ತೀಚೆಗೆ ಉಪವಾಸ ಸತ್ಯಾಗ್ರಹ ನಡೆಸಿದ್ದರು. (ಆಂಧ್ರಪ್ರದೇಶ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+