ಶೀಘ್ರ ದೇವೇಗೌಡರ ಭ್ರಷ್ಟಾಚಾರದ ಪುಸ್ತಕ : ಸಿಎಂ

Yeddyurappa
ಹುಬ್ಬಳ್ಳಿ, ಡಿ. 27 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ನಡೆದಿರುವ ಅವ್ಯವಹಾರಗಳ ಸಮಗ್ರ ಮಾಹಿತಿ ಒಳಗೊಂಡ ಪುಸ್ತಕವನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಂದೆ ಮಕ್ಕಳು ಆಡಳಿತದಲ್ಲಿದ್ದಾಗ ಸಾಕಷ್ಟು ಭ್ರಷ್ಟಾಚಾರ ನಡೆಸಿದ್ದಾರೆ. ಕೆಪಿಎಸ್ ಸಿ ನೇಮಕದಲ್ಲಂತೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಿತಿಮೀರಿದ ಅವ್ಯವಹಾರ ನಡೆಸಿದ್ದಾರೆ. ಈ ಎಲ್ಲ ಭ್ರಷ್ಟಾಚಾರವನ್ನು ಹೊಂದಿದ ಸಮಗ್ರ ಪುಸ್ತಕವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ದೇವೇಗೌಡರು ಬಯಸಿದರೆ ಸಂಸತ್ ಭವನದಲ್ಲೇ ಬಿಡುಗಡೆ ಮಾಡಲು ಸಿದ್ಧ ಎಂದರು.

ಚಾಮರಾಜನಗರಕ್ಕೆ ಸಿಎಂ ಭೇಟಿ : ಚಾಮರಾಜನಗರಕ್ಕೆ ಭೇಟಿ ನೀಡಿದರೆ ಮುಖ್ಯಮಂತ್ರಿ ಪದವಿ ಕಳೆದುಕೊಳ್ಳುತ್ತಾರೆ ಎಂಬ ನಂಬಿಕೆ ರಾಜಕೀಯ ವಲಯದಲ್ಲಿದೆ. ಇದನ್ನು ಹುಸಿಗೊಳಿಸಿರುವ ಮುಖ್ಯಮಂತ್ರಿ ಭಾನುವಾರ ಚಾಮರಾಜನಗರದ ಸಂತೇಮರಹಳ್ಳಿ ತಾಲ್ಲೂಕಿಗೆ ಭೇಟಿ ನೀಡಿ ಚುನಾವಣೆ ಪ್ರಚಾರ ನಡೆಸಿದರು.

ತಾಕತ್ತಿದ್ದರೆ ಬಿಜೆಪಿಯವರು ಮುಖ್ಯಮಂತ್ರಿಯವರನ್ನು ಚಾಮರಾಜನಗರಕ್ಕೆ ಕರೆ ತನ್ನಿ ಎಂದು ಸವಾಲು ಹಾಕಿದ್ದ ಕಾಂಗ್ರೆಸ್ ಸಂಸದ ಧ್ರುವನಾರಾಯಣ ಅವರಿಗೆ ತಿರುಗೇಟು ನೀಡಿದ ಸಿಎಂ, ಕಾಂಗ್ರೆಸ್ಸಿಗರಿಗೆ ನಮ್ಮ ತಾಕತ್ತಿನ ಬಗ್ಗೆ ತಿಳಿಸಿ ಎಂದು ವ್ಯಂಗ್ಯವಾಡಿದರು. ಜಿಪಂ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಲಿದೆ ಎಂದ ಅವರು, ಜೆಡಿಎಸ್, ಕಾಂಗ್ರೆಸ್ ಪಕ್ಷಗಳಿಗೆ ಮತ್ತೊಮ್ಮೆ ಭಾರಿ ಮುಖಭಂಗ ಕಾದಿದೆ ಎಂದು ಯಡಿಯೂರಪ್ಪ ಹೇಳಿದರು.(ಯಡಿಯೂರಪ್ಪ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+