ಬೇಲೇಕೇರಿ ಅದಿರು ನಾಪತ್ತೆ, ಸಿಐಡಿ ಚಾರ್ಜ್ ಶೀಟ್

ಬೇಲೇಕೇರಿ ಬಂದರು ಸಂರಕ್ಷಣಾಧಿಕಾರಿಯಾಗಿದ್ದ ಮಹೇಶ್ ಬಿಲಿಯೆ, ಸಲಗಾಂವಕರ್ ಮೈನಿಂಗ್ ಇಂಡಸ್ಟ್ರೀಸ್, ತುಂಗಭದ್ರ ಮಿನರಲ್ಸ್, ಜಿಂಪೆಕ್ಸ್ ಲಿಮಿಟೆಡ್ ಮತ್ತು ಆಯಾ ಕಂಪನಿಗಳ ಪ್ರತಿನಿಧಿಗಳ ವಿರುದ್ಧ ಕಲಂ 379, 411, 109, 120(ಬಿ) ಅಡಿ ಕೋರ್ಟ್ ಗೆ ದೋಷಾರೋಪಣ ಪತ್ರ ಸಲ್ಲಿಸಲಾಗಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಸಾಗಿಸಲ್ಪಟ್ಟಂತಹ ಕಬ್ಬಿಣದ ಅದಿರನ್ನು ಜಪ್ತಿ ಮಾಡಿ, ಬೇಲೇಕೇರಿ ಬಂದರಿನಲ್ಲಿ ದಾಸ್ತಾನು ಮಾಡಿಟ್ಟಿದ್ದ ಸುಮಾರು 5 ಲಕ್ಷ ಟನ್ ಕಬ್ಬಿಣದ ಅದಿರನ್ನು ಯಾವುದೇ ಪರವಾನಿಗೆ ಇಲ್ಲದೆ ಸಾಗಣೆ ಮಾಡಿರುವುದಾಗಿ ಅಂಕೋಲಾದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜೂನ್ 8ರಂದು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದರು.
ಬೇಲೇಕೇರಿ ಬಂದರಿನಲ್ಲಿ 4 ಸ್ಟೀವ್ ಡೋರ್ ಕಂಪನಿಗಳು ದಾಸ್ತಾನು ಕಾರ್ಯ ನಿರ್ವಹಿಸುತ್ತಿದ್ದು, ಕಬ್ಬಿಣದ ಅದಿರು ರಫ್ತು ಮಾಡುವ ಕಂಪನಿಗಳೊಂದಿಗೆ ಶಾಮೀಲಾಗಿ ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಿಸಿರುವ ಆರೋಪವನ್ನು ಹೊತ್ತಿದ್ದವು.
ಇದೀಗ, ತನಿಖೆಯ ಪ್ರಥಮ ಹಂತವಾಗಿ ಸ್ಟೀವ್ ಡೋರ್ ಸಲಗಾಂವಕರ್ ಮೈನಿಂಗ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಗೆ ಸಂಬಂಧಿಸಿದ ಕಂಪನಿಗಳ ಆರೋಪ ಕುರಿತು ತನಿಖೆ ಪೂರ್ಣಗೊಂಡು, ಡಿ.24ರಂದು ಸಿಐಡಿ ತನಿಖಾಧಿಕಾರಿಗಳು ಅಂಕೋಲಾ ಜೆಎಂಎಫ್ಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದಾರೆ. ಬೇಲೇಕೇರಿ ಅದಿರು ನಾಪತ್ತೆಯಿಂದ ಒಟ್ಟಾರೆ 44 ಕೋಟಿ ರುಪಾಯಿ ನಷ್ಟವಾಗಿತ್ತು.(ಗಣಿಗಾರಿಕೆ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications