ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದು ಬಿಜೆಪಿ ಸೇರಿಕೊಂಡರೂ ಅಚ್ಚರಿಯಿಲ್ಲ : ಈಶ್ವರಪ್ಪ

By Mrutyunjaya Kalmat
|
Google Oneindia Kannada News

KS Eshwarappa
ಮೈಸೂರು, ಡಿ. 28 : ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರುತ್ತಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮುಂದೊಂದು ದಿನ ಬಿಜೆಪಿ ಸೇರಿಕೊಂಡರೂ ಅಚ್ಚರಿ ಪಡಬೇಕಾಗಿಲ್ಲ ಎಂದು ಪಕ್ಷದ ಬಿಜೆಪಿ ಅಧ್ಯಕ್ಷ ಕೆ ಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷದ ತತ್ವ ಮತ್ತು ಸಿದ್ದಾಂತಗಳನ್ನು ಒಪ್ಪಿಕೊಂಡು ಬರುವುದಾದರೆ ಸಿದ್ದರಾಮಯ್ಯ ಸೇರಿದಂತೆ ಎಲ್ಲರನ್ನೂ ಬಿಜೆಪಿಗೆ ಸ್ವಾಗತಿಸುತ್ತದೆ ಎಂದರು. ದೇವೇಗೌಡರು ಮುಖ್ಯಮಂತ್ರಿ ಸ್ಥಾನದ ಭರವಸೆ ನೀಡಿದ್ದರಿಂದ ಕಾಂಗ್ರೆಸ್ ಮತ್ತು ಆ ಪಕ್ಷದ ನಾಯಕರನ್ನು ಸಿದ್ದರಾಮಯ್ಯ ಸದಾ ಟೀಕಿಸುತ್ತಿದ್ದರು. ಆದರೆ, ಮುಖ್ಯಮಂತ್ರಿ ಸ್ಥಾನದ ಭರವಸೆ ಹುಸಿಯಾದಾಗ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದರು ಎಂದರು.

ಕಾಂಗ್ರೆಸ್‌ ನಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನ ನೀಡದಿದ್ದಾಗ ಒತ್ತಡದ ತಂತ್ರ ಅನುಸರಿಸಿ ಅಧಿಕಾರ ಪಡೆದುಕೊಂಡರು. ಇದೀಗ ಬಿಜೆಪಿ ಸೇರಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ ಎಂಬ ಕನಸೇನಾದರೂ ಬಿದ್ದರೆ ಸಿದ್ದರಾಮಯ್ಯ ಪಕ್ಷಕ್ಕೆ ಬಂದರೂ ಬರಬಹುದು ಎಂದು ವ್ಯಂಗ್ಯವಾಡಿದರು. ಹೀಗೆ ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರುತ್ತಿರುವ ಸಿದ್ದರಾಮಯ್ಯ ಅವರಿಗೆ ಅಧಿಕಾರ ಸಿಗದಿದ್ದಾಗ ಮಾತ್ರ ಅಹಿಂದ ಸಂಘಟನೆ ನೆನಪಾಗುತ್ತದೆ ಎಂದು ಟೀಕಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಆರೋಪದಡಿ ಯಡಿಯೂರಪ್ಪ ಸೇರಿದಂತೆ ಅನೇಕ ಬಿಜೆಪಿ ಸಚಿವರನ್ನು ಜೈಲಿಗೆ ಕಳುಹಿಸಲಾಗುವುದು. ಈಶ್ವರಪ್ಪ ಅವರಿಗೆ ತಲೆ, ಬುದ್ದಿ, ಮೆದುಳು ಯಾವುದೂ ಇಲ್ಲ ಎಂಬ ಸಿದ್ದರಾಮಯ್ಯ ಮಾಡಿದ್ದ ಟೀಕೆಗೆ ಈಶ್ವರಪ್ಪ ಅವರ ಪ್ರತಿಕ್ರಿಯೆ ಇದು.(ಕೆ ಎಸ್ ಈಶ್ವರಪ್ಪ)

English summary
BJP state unit president KS Eshwarappa once again hit out at opposition leader of state assembly Siddaramaiah, calling him a party hopper. Claiming the Congress leader was desperate to become chief minister, he maintained he will even join the BJP, if offered the post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X