ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣೆ ಬಳಿಕ ವಿದ್ಯುತ್ ದರ ಏರಿಕೆ : ಶೋಭಾ

By Mrutyunjaya Kalmat
|
Google Oneindia Kannada News

Shobha Karandlaje
ಗುಲ್ಬರ್ಗಾ, ಡಿ. 28 : ವಿದ್ಯುತ್ ದರ ಏರಿಕೆಗೆ ಸಂಬಂಧಿಸಿದಂತೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಈಗಾಗಲೇ ದರ ಏರಿಕೆಗೆ ಶಿಫಾರಸ್ಸು ಮಾಡಿದೆ. ಆದರೆ, ಇದುವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಖ್ಯವಾಗಿ ವಿದ್ಯುತ್ ಕಂಪನಿಗಳು ಹಾನಿಯಲ್ಲಿವೆ. ಇದರ ಜೊತೆಗೆ ಉಚಿತ ವಿದ್ಯುತ್ ನ್ನು ಸಹ ನೀಡುತ್ತಿದ್ದೇವೆ. ವಿದ್ಯುತ್ ಸೋರಿಕೆ ಕೂಡಾ ನಿರಂತರವಾಗಿದೆ. ನಿಗಮ ಮಾಡಿರುವ ಶಿಫಾರಸ್ಸಿನಲ್ಲಿ ಗೊಂದಲವಿದೆ. ಹೀಗಾಗಿ ಈ ಕುರಿತು ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು.

ಗ್ರಾಮೀಣ ಪ್ರದೇಶಕ್ಕೆ ಮಾರ್ಚ್ ತಿಂಗಳಲ್ಲಿ 6 ತಾಸು ಮೂರು ಫೇಸ್ ವಿದ್ಯುತ್ ನೀಡಲು ನಿರ್ಧರಿಸಲಾಗಿದೆ. ಛತ್ತೀಸ್ ಗಢದಿಂದ 300 ಮೆ.ವ್ಯಾ ವಿದ್ಯುತ್ ಖರೀದಿಸಲಾಗುವುದು. ಹೊಸ ವರ್ಷದಲ್ಲಿ 600 ಮೆ.ವ್ಯಾ ಸಾಮರ್ಥ್ಯದ ಯೋಜನೆ ಸಿದ್ಧಗೊಳ್ಳಲಿದೆ. ಇದಕ್ಕೆ ಕೇಂದ್ರ ಸರಕಾರದ ಅನುಮತಿ ದೊರೆತಿಲ್ಲ. ಈ ಕುರಿತು ಕೇಂದ್ರ ಪರಿಸರ ಸಚಿವ ಜೈರಾಮ್ ರಮೇಶ್ ಅವರೊಂದಿಗೆ ಚರ್ಚಿಸಲಾಗುವುದು ಎಂದು ಶೋಭಾ ಕರಂದ್ಲಾಜೆ ಹೇಳಿದರು.(ಶೋಭಾ ಕರಂದ್ಲಾಜೆ)

English summary
The state government will decide on increasing the power tariff after elections to zilla and taluk panchayats, said Minister for Power Shobha Karandlaje here on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X