ಹೊಸ ವರ್ಷ ಆಚರಣೆ: ನಂದಿ ಬೆಟ್ಟಕ್ಕೆ ನೋ ಎಂಟ್ರಿ

Nandi hills New Year restrictions
ಬೆಂಗಳೂರು, ಡಿ. 29: ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿ ಹಾಗೂ ಸ್ಕಂದ ಗಿರಿಧಾಮಗಳಿಗೆ ಡಿ.31ರಂದು ಸಂಜೆ 6 ಗಂಟೆಯಿಂದ ಜ. 1ರಂದು ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಟಿ.ಡಿ.ಪವಾರ್ ತಿಳಿಸಿದ್ದಾರೆ.

ನಂದಿ ಗಿರಿಧಾಮದಲ್ಲಿ ಪರಿಸರ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬೆಟ್ಟದ ಪ್ರವೇಶವನ್ನು ನಿಷೇಧಿಸಿರುವುದಾಗಿ ತಿಳಿಸಿದ ಅವರು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸಹಕರಿಸಬೇಕೆಂದು ಮನವಿ ಮಾಡಿದರು.

ಬೆಟ್ಟದಲ್ಲಿನ ಕೊಠಡಿಗಳನ್ನು ಕಾಯ್ದರಿಸಿಕೊಂಡಿರುವವರು ಡಿ.31ರಂದು ಸಂಜೆ 6 ಗಂಟೆಯೊಳಗೆ ತಮ್ಮ ತಮ್ಮ ಕೊಠಡಿಗಳನ್ನು ಸೇರಬೇಕು. ಅನಂತರ ಬಂದವರಿಗೆ ಯಾವುದೇ ಕಾರಣಕ್ಕೂ ಪ್ರವೇಶಕ್ಕೆ ಅನುವು ಮಾಡಿಕೊಡುವುದಿಲ್ಲ. ಅನಧಿಕೃತ ಪ್ರವೇಶ ತಡೆಗಟ್ಟಲು ಚೆಕ್ ಪೋಸ್ಟ್‌ಗಳನ್ನು ಅಳವಡಿಸಲಾಗಿದೆ ಎಂದರು.

ಹೊಸ ವರ್ಷಾಚರಣೆ ನೆಪದಲ್ಲಿ ಪ್ರವಾಸಿಗರು ಧೂಮಪಾನ, ಮದ್ಯಪಾನ ಜೊತೆಗೆ ಅನೈತಿಕ ಚಟುವಟಿಕೆಗಳಲ್ಲಿ ತೊಡಗುವುದು ಹೆಚ್ಚಾಗಿದ್ದರಿಂದ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಡಿ.31ರ ಮಧ್ಯರಾತ್ರಿವರೆಗೂ ಮದ್ಯದಂಗಡಿ : ಹೊಸ ವರ್ಷಾಚರಣೆ ಪ್ರಯುಕ್ತ ಡಿ.31ರಂದು ಮಧ್ಯರಾತ್ರಿ 1 ಗಂಟೆ ವರೆಗು ಬಾರ್ ಹಾಗೂ ರೆಸ್ಟೋರೆಂಟ್ ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ್ ಬಿದರಿ ಹೇಳಿದ್ದಾರೆ.[ಹೊಸ ವರ್ಷ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+