ಸಂಡೂರಿನಲ್ಲಿ ಬಿಜೆಪಿಗೆ ಮಣ್ಣು ತಿನ್ನಿಸಿದ ಮತದಾರ

ಜಿಲ್ಲಾ - ತಾಲೂಕು ಪಂಚಾಯಿತಿ ಚುನಾವಣೆ ಪ್ರಕ್ರಿಯೆ ಪ್ರಾರಂಭ ಆದಾಗಿನಿಂದಲೂ ಜಿ. ಸೋಮಶೇಖರರೆಡ್ಡಿ ಅವರು ಸಂಡೂರು ತಾಲೂಕಿನಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಿಸುವ, ಪ್ರಚಾರ ನಿರ್ವಹಿಸುವ ಎಲ್ಲಾ ಜವಾಬ್ದಾರಿವಹಿಸಿದ್ದರು.
ಬಳ್ಳಾರಿಯಿಂದ ಪಡ್ಡೆ ಹುಡುಗರ ಗುಂಪುಗಳನ್ನು ಕಟ್ಟಿಕೊಂಡು 5 - 6 ಸ್ಕ್ರಾಪಿಯೋಗಳಲ್ಲಿ ನಿತ್ಯ ನಸುಕಿನ 7 ಗಂಟೆಗೆಲ್ಲಾ ಸಂಡೂರು ತಾಲೂಕಿನ ಹಳ್ಳಿಗಳಲ್ಲಿ ಮುಖಂಡರು, ಮತದಾರರ ಮನೆಯಂಗಳಗಳಲ್ಲಿ ಪ್ರತ್ಯಕ್ಷ ಆಗಿ ಮತ ಕೇಳಿದರೂ ಮತದಾರರು ಅವರ ಲೆಕ್ಕಾಚಾರವನ್ನೆಲ್ಲ ತಲೆಕೆಳಗು ಮಾಡಿದ್ದಾರೆ.
ಸಂಡೂರು ಶಾಸಕ ಇ. ತುಕಾರಾಂ, ಸಂತೋಷ್ ಲಾಡ್ - ಅನಿಲ್ ಲಾಡ್ : ಕಾರ್ತಿಕ್ ಘೋರ್ಪಡೆ - ವೆಂಕಟರಾವ್ ಘೋರ್ಪಡೆ ಅವರ ಬಿಗಿ ಹಿಡಿತದಲ್ಲಿ ಇರುವ ಮತದಾರರು ಬಿಜೆಪಿಗೆ ನಿರೀಕ್ಷಿತ ಗೆಲುವು ನೀಡದೇ ಬೊಮ್ಮಘಟ್ಟ ಮತ್ತು ಕಾಳಿಂಗೇರಿ ಕ್ಷೇತ್ರಗಳಲ್ಲಿ ಮಾತ್ರ ಆಶೀರ್ವಾದ ಮಾಡಿದ್ದಾರೆ. ಈ ಕ್ಷೇತ್ರಗಳಲ್ಲಿ ಬಿಜೆಪಿ ಇದೇ ಮೊದಲಬಾರಿಗೆ ಖಾತೆಯನ್ನು ತೆರೆದಿದೆ.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಭುತ್ವ ಸಾಧಿಸಿ, ಭವಿಷ್ಯದ ಚುನಾವಣೆಯಲ್ಲಿ ಶಾಸಕರನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವ ದೂರಾಲೋಚನೆ ಹೊಂದಿದ್ದ ಬಿಜೆಪಿ ಮತ್ತು ರೆಡ್ಡಿ ಬ್ರದರ್ಸ್ಗೆ ಈ ಫಲಿತಾಂಶ ಭಾರೀ ಮುಖಭಂಗ ಮಾಡಿದಂತಾಗಿದೆ. ಯಥಾಪ್ರಕಾರ ಈ ತಾಲೂಕಿನಲ್ಲಿ ಕಾಂಗ್ರೆಸ್ನ 15 ಸದಸ್ಯರು ಗೆಲುವು ಸಾಧಿಸಿದ್ದಾರೆ. [ಪಂಚಾಯಿತಿ ಚುನಾವಣೆ]
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications