ಬಿಜೆಪಿಗೆ ಸಂಚಕಾರ, ಗೆಲುವಿನಡೆಗೆ 'ಕೈ' ಪಡೆ

ಆಡಳಿತರೂಢ ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಕಾಂಗ್ರೆಸ್ ಪಾಲಾಗಿದೆ. ಮಂಗಳೂರು, ತುಮಕೂರಿನಲ್ಲಿ ಬಿಜೆಪಿಗೆ ಸೆಡ್ಡು ಹೊಡೆದಿರುವ ಕಾಂಗ್ರೆಸ್, ಜೆಡಿಎಸ್, ಸಮಬಲದ ಪೈಪೋಟಿ ಕಂಡು ಬಂದಿದೆ. ನಿರೀಕ್ಷೆಯಂತೆ ರಾಮನಗರ ಜಿಲ್ಲೆಯನ್ನು ಮತ್ತೆ ತನ್ನ ತಕ್ಕೆಗೆ ತೆಗೆದುಕೊಳ್ಳುವ ಮೂಲಕ ಜೆಡಿಎಸ್ ಪ್ರಾಬಲ್ಯವನ್ನು ಮೆರೆದಿದೆ. ಮಂಡ್ಯ, ಹಾಸನದಲ್ಲಿಯೂ ಜೆಡಿಎಸ್ ಮುಂದಿದೆ.
ಬಿಜೆಪಿ ಭದ್ರಕೋಟೆ ಎನಿಸಿದ್ದ ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ಕಾಂಗ್ರೆಸ್ ಚಿಗಿತುಕೊಂಡಿದ್ದು, ಗದಗ, ಬಿಜಾಪುರದಲ್ಲಿ ಕಾಂಗ್ರೆಸ್ ತನ್ನ ಖಾತೆ ತೆರಿದಿದೆ. ಚಿಕ್ಕಮಗಳೂರು ಜಿಲ್ಲೆ ಬಿಜೆಪಿ ಪಾಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮುಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಬಾಗಲಕೋಟಿಯಲ್ಲಿ ಕಾಂಗ್ರೆಸ್-ಬಿಜೆಪಿ ಸಮಬಲ ಪೈಪೋಟಿ ನಡೆದಿದೆ. ಹಾವೇರಿ ಬಿಜೆಪಿ ಪಾಲಾಗಿದೆ.
ಬೀದರ್ ಬಿಜೆಪಿ ಪಾಲಾಗಿದೆ. ರೆಡ್ಡಿಗಳ ಭದ್ರಕೋಟೆ ಬಳ್ಳಾರಿಯಲ್ಲಿ ಬಿಜೆಪಿ-ಕಾಂಗ್ರೆಸ್ ಸಮಬಲದ ಪೈಪೋಟಿ ನಡೆದಿದೆ. ಯಾದಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಂದಿದೆ. ಕೊಪ್ಪಳದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಬೆಂಗಳೂರು ನಗರದಲ್ಲಿ ಬಿಜೆಪಿ ಜಯ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿ ಗೆದ್ದಿದೆ. ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಂದಿದೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಮುಂದಿದೆ. ಕೋಲಾರದಲ್ಲಿ ಜೆಡಿಎಸ್ ಮುಂದಿದೆ. ಶಿವಮೂಗ್ಗದಲ್ಲಿ ಬಿಜೆಪಿ ಮುಂದಿದೆ. ತುಮಕೂರಿನಲ್ಲಿ ಜೆಡಿಎಸ್ ಮುಂದಿದೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ.











Click it and Unblock the Notifications