ಲವ್ವಿ-ಡವ್ವಿಗೆ ಕಾಂಗ್ರೆಸ್-ಜೆಡಿಎಸ್ ಕಸರತ್ತು

ಇಂದು ನವದೆಹಲಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಕೋಮುವಾದಿ ಬಿಜೆಪಿ ಪಕ್ಷವನ್ನು ಮಣಿಸಲು ಜಾತ್ಯಾತೀತ ಪಕ್ಷಗಳು ಒಂದಾಗಬೇಕಾಗಿರುವುದು ಅನಿವಾರ್ಯವಾಗಿದೆ. ರಾಜ್ಯದಲ್ಲಿರುವ ಬಿಜೆಪಿ ಸರಕಾರದ ದುರಾಡಳಿತದಿಂದ ಬೇಸತ್ತಿರುವ ಜನತೆ ಅನೇಕ ಕಡೆಗಳಲ್ಲಿ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಅತಂತ್ರ ಜಿಲ್ಲಾ ಪಂಚಾಯಿತಿ ನಿರ್ಮಾಣವಾಗಿರುವ ಕಡೆಗೆಲ್ಲಾ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಚಿಂತನೆ ನಡೆಸಲಾಗಿದೆ ಎಂದರು.
ಪಕ್ಷದ ರಾಷ್ಟ್ರೀಯ ವರಿಷ್ಠ ಎಚ್ ಡಿ ದೇವೇಗೌಡರೊಂದಿಗೆ ಚರ್ಚಿಸಿ ಇನ್ನೆರಡು ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಮುಖ್ಯಮಂತ್ರಿಗಳು ಸ್ವಂತ ಕ್ಷೇತ್ರದಲ್ಲೇ ತೀವ್ರ ಪೈಪೋಟಿ ಎದುರಿಸಿದ್ದಾರೆ. ಜನರ ಪ್ರೀತಿಯನ್ನು ಕಳೆದುಕೊಂಡಿರುವ ಸರಕಾರ ಮತ್ತು ಮುಖ್ಯಮಂತ್ರಿ ತೊಲಗಬೇಕು ಎಂದು ಕುಮಾರಸ್ವಾಮಿ ಹೇಳಿದರು.
ಚುನಾವಣೆ ಫಲಿತಾಂಶಗಳು ಘೋಷಣೆ ನಂತರವೇ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ, ಅತಂತ್ರ ಜಿಲ್ಲಾ ಪಂಚಾಯಿತಿ ಉಂಟಾಗಿರುವ ಜಿಲ್ಲೆಗಳಲ್ಲಿ ಜಾತ್ಯಾತೀತ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಯೋಚಿಸಲಾಗಿದೆ. ಪಕ್ಷದ ಹೈಕಮಾಂಡ್ ಗೂ ಇದನ್ನು ವಿವರಿಸಲಾಗಿದೆ. ಮುಂದಿನ ಕೆಲ ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಂಗಳವಾರ ಅವರ ಹೇಳಿದರು. 10 ಜಿಲ್ಲಾ ಪಂಚಾಯಿತಿಗಳಲ್ಲಿ ಸ್ಪಷ್ಟ ಬಹುಮತ ದೊರೆತಿಲ್ಲ. ಹೀಗಾಗಿ ಕಾಂಗ್ರೆಸ್-ಜೆಡಿಎಸ್ ಕೈಜೋಡಿಸುವುದಾಗಿ ಹೇಳಿಕೊಂಡಿವೆ.(ಎಚ್ ಡಿ ಕುಮಾರಸ್ವಾಮಿ)












Click it and Unblock the Notifications