ಮೇಲುಕೋಟೆ ಅಭಿವೃದ್ಧಿಗೆ 5 ಕೋಟಿ : ಯಡಿಯೂರಪ್ಪ
ಮಂಡ್ಯ,
ಜ. 6 : ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಚೆಲುವ ನಾರಾಯಣ ಸ್ವಾಮಿ ಕ್ಷೇತ್ರದ ಅಭಿವೃದ್ಧಿಗೆ 5 ಕೋಟಿ ರುಪಾಯಿಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. id="toptextpromo">ಮೇಲುಕೋಟೆ
ದೇವಸ್ಥಾನಕ್ಕೆ ಭೇಟಿ ನೀಡಿ, ಚೆಲುವ ನಾರಾಯಣಸ್ವಾಮಿ ದರ್ಶನ ಪಡೆದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಮೇಲುಕೋಟೆ ಕ್ಷೇತ್ರದ ಅಭಿವೃದ್ಧಿಗೆ ಕಳೆದ ಬಜೆಟ್ ನಲ್ಲಿ 2 ಕೋಟಿ ರುಪಾಯಿಗಳನ್ನು ನೀಡಲಾಗಿದೆ. ಇನ್ನೂ 10 ಕೋಟಿ ರುಪಾಯಿಗಳ ವೆಚ್ಚದಲ್ಲಿ ಈ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಮುಂದಿನ ಬಜೆಟ್ ನಲ್ಲಿ 5 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. id='are-slot-1' class='oiad oi-axt oiadv'> id='top-searched-articles'>ಮೇಲುಕೋಟೆಯಲ್ಲಿರುವ
ದೇವಾಲಯಗಳು ಹಾಗೂ ಸ್ಮಾರಕಗಳ ಸಂರಕ್ಷಣೆಗೆ ಯೋಜನೆ ರೂಪಿಸಿ ಅಭಿವೃದ್ಧಿಪಡಿಸಬೇಕು. ಪ್ರವಾಸಿಗಳ ಅನುಕೂಲಕ್ಕಾಗಿ ಯಾತ್ರಿ ನಿವಾಸ ನಿರ್ಮಾಣ, ಅನ್ನ ದಾಸೋಹ ಛತ್ರ ಮುಂತಾದವುಗಳ ನಿರ್ಮಾಣಕ್ಕೆ ಕ್ರಮ ವಹಿಸಬೇಕು ಎಂದು ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.(ದೇಗುಲ)











Click it and Unblock the Notifications